ವಿದ್ಯುತ್ ಬಿಲ್ ಕಟ್ಟದೇ ಬಾಕಿ ಇದ್ದರೂ ಗೃಹಜ್ಯೋತಿ ಲಾಭ ಪಡೆಯಬಹುದು! – ಬಾಕಿ ಕಟ್ಟಲು ಗಡುವು ಯಾವಾಗ?
ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಗ್ರಾಹಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಗ್ರಾಹಕರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದ ಗ್ರಾಹಕರು ಕೂಡ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಕಂಪನಿ ಹೇಳಿದೆ.
ಇದನ್ನೂ ಓದಿ: ಇನ್ನೂ ಬಗೆಹರಿಯದ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು – ರಾಜ್ಯಕ್ಕೆ ಇಬ್ಬರು ವೀಕ್ಷಕರ ಆಗಮನ
ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದ ಗ್ರಾಹಕರು ಕೂಡ ಸೆಪ್ಟೆಂಬರ್ 30ರೊಳಗೆ ವಿದ್ಯುತ್ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆ ಗೃಹಜ್ಯೋತಿ ಲಾಭ ಪಡೆಯಬಹುದು. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜುಲೈ 25ರಿಂದ ಆಗಸ್ಟ್ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು. ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಅವರು, ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಆದಷ್ಡು ಬೇಗ ನೋಂದಾಯಿಸಿಕೊಳ್ಳಿ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.