ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – ನೋಂದಣಿಗೆ ಯಾವೆಲ್ಲಾ ದಾಖಲೆ ಬೇಕು?

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – ನೋಂದಣಿಗೆ ಯಾವೆಲ್ಲಾ ದಾಖಲೆ ಬೇಕು?

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ವಿಧಾನಸಭಾ ಚುನಾವಣೆ ವೇಳೆ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯಡಿ ತಿಂಗಳಿಗೆ 2000 ರೂಪಾಯಿ ನೀಡಲಾಗುವುದು ಎಂದು ಘೋಷಿಸಿತ್ತು. ಮಹಿಳೆಯರು ಕೂಡ ಈ ಯೋಜನೆಯಡಿ 2 ಸಾವಿರ ರೂಪಾಯಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಇಂದಿನಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಇದನ್ನೂ ಓದಿ: ನೋವು ತೋಡಿಕೊಂಡ ಬಡ ಮಹಿಳೆಗೆ ಸತಃ ತಾನೇ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ!

ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡಲಾಗುವುದು ಎಂದು ಕಾಂಗ್ರೆಸ್‌ ಘೋಷಿಸಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಮನೆ ಯಾರು? ಅತ್ತೆನಾ.. ಸೊಸೆನಾ ಎಂಬ ಪ್ರಶ್ನೆ ಕೂಡ ಉದ್ಬವವಾಗಿತ್ತು. ಇದಕ್ಕೆ ಮನೆಯವರೇ ಯಜಮಾನಿ ಯಾರು ಎಂದು ತೀರ್ಮಾನಿಸಿ ಅರ್ಜಿ ಸಲ್ಲಿಸಲಿ ಎಂದು ಸರ್ಕಾರ ಹೇಳಿತ್ತು. ಇದೀಗstyle=”color:blue;” ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌  ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವುದು ಎಲ್ಲಿ?

ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್​​​ನಲ್ಲಿ ಆನ್ನೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಾಗಿ ಪ್ರತ್ಯೇಕ ಪೋರ್ಟ​ಲ್​​ ಸಿದ್ಧಪಡಿಸಲಾಗಿದೆ.

ಬೇಕಾಗುವ ದಾಖಲೆಗಳು

ರೇಷನ್​​ ಕಾರ್ಡ್​​, ಬ್ಯಾಂಕ್​​​ ಪಾಸ್‌ಬುಕ್‌,​​ ಆಧಾರ್​​ ಕಾರ್ಡ್​​, ಫೋಟೋ, ಯಾವುದಾದರೂ ಗುರುತಿನ ಚೀಟಿ ( ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು)

suddiyaana