ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ – ಕೆಎಸ್‌ಆರ್‌ಟಿಸಿ ಬಸ್‌ ಸೇವೆಯಲ್ಲಿ ಭಾರಿ ವ್ಯತ್ಯಯ!

ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ – ಕೆಎಸ್‌ಆರ್‌ಟಿಸಿ ಬಸ್‌ ಸೇವೆಯಲ್ಲಿ ಭಾರಿ ವ್ಯತ್ಯಯ!

ಬೆಂಗಳೂರು: ಕಾಂಗ್ರೆಸ್‌ನ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಇಂದು (ಬುಧವಾರ) ಚಾಲನೆ ಸಿಗಲಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ಗಳ ಸೇವೆಯಲ್ಲಿ ಭಾರಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಆ.30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ – ನಾಡದೇವತೆಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ, ಡಿಸಿಎಂ!

ಮೈಸೂರಿನಲ್ಲಿ‌ ನಡೆಯುವ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರನ್ನು ಕರೆದೊಯ್ಯಲು 2000 ಸರ್ಕಾರಿ ಬಸ್‌ಗಳನ್ನು  ರಾಜ್ಯ ಸರ್ಕಾರ ಬುಕ್‌ ಮಾಡಿದೆ.

ಬಿಎಂಟಿಸಿ ವತಿಯಿಂದ 200ಕ್ಕೂ ಹೆಚ್ಚು ಬಸ್​ಗಳು ಮತ್ತು ಕೆಎಸ್​ಆರ್​ಟಿಸಿಯಿಂದ 1,800 ಕ್ಕೂ ಹೆಚ್ಚು ಬಸ್​ಗಳು ಮೈಸೂರಿನತ್ತ ಪಯಣ ಬೆಳಸಲಿದೆ. ಬೆಂಗಳೂರು, ಮಂಡ್ಯ, ತುಮಕೂರು, ಚಾಮರಾಜನಗರ, ಮೈಸೂರು, ಮಡಿಕೇರಿ, ಹಾಸನ, ಕೋಲಾರ, ಸೇರಿದಂತೆ ಅನೇಕ ಜಿಲ್ಲೆಗಳಿಂದ ಅಧಿಕ ಸಾರಿಗೆ ಬಸ್​ಗಳು ಮೈಸೂರಿಗೆ ಬರಲಿದೆ. ವಾಯುವ್ಯ ಕರ್ನಾಟಕ, ಈಶಾನ್ಯ ಕರ್ನಾಟಕ ನಿಗಮಗಳಿಂದಲೂ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

suddiyaana