ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಮುಂದಿನ ವಾರದ ಮುಹೂರ್ತ – ಪ್ರಿಯಾಂಕ ಗಾಂಧಿ ಚಾಲನೆ!

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಮುಂದಿನ ವಾರದ ಮುಹೂರ್ತ – ಪ್ರಿಯಾಂಕ ಗಾಂಧಿ ಚಾಲನೆ!

ಬೆಂಗಳೂರು: ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಈಗಾಗಲೇ ಜಾರಿಯಾಗಿದೆ. ಇದೀಗ ಕಾಂಗ್ರೆಸ್‌ ನ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಶೀಘ್ರವೇ ಚಾಲನೆ ಸಿಗಲಿದ್ದು, ಕಾಂಗ್ರೆಸ್​ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಕಾಂಗ್ರೆಸ್​ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಗೃಹಲಕ್ಷ್ಮೀ ಯೋಜನೆ ಅರ್ಜಿಸಲ್ಲಿಕೆಗೆ ಸರ್ಕಾರ ಶುಕ್ರವಾರ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಚೆಂಡು ತೆಗೆಯಲು ಹೋಗಿ ಬಾವಿಗೆ ಬಿದ್ದ ತಮ್ಮ – ಜೀವದ ಹಂಗು ತೊರೆದು ರಕ್ಷಿಸಿದಳು 8 ವರ್ಷದ ಅಕ್ಕ

ಗೃಹಜ್ಯೋತಿ ಯೋಜನೆಗೆ ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ರಾಜ್ಯ ಸರ್ಕಾರ ಮೂರು ದಿನಾಂಕಗಳನ್ನು ನೀಡಿದೆ. ಜುಲೈ 16,17,18 ರಂದು ಪ್ರಿಯಾಂಕ ಗಾಂಧಿ ವಾದ್ರಾ ಮೂಲಕ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸರ್ಕಾರ ಯೋಜಿಸಿದೆ. ಪ್ರಿಯಾಂಕ ಗಾಂಧಿ ಒಪ್ಪಿದ ದಿನಾಂಕದಂದು ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತಿಮವಾಗಿ ಪ್ರಿಯಾಂಕ ಗಾಂಧಿ ಯಾವ ದಿನಾಂಕವನ್ನು ಆಯ್ಕೆ ಮಾಡುತ್ತಾರೋ ಆ ದಿನವೇ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ.

ಇದಲ್ಲದೆ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರಿ ವ್ಯಾಜ್ಯಗಳ‌ ನಿರ್ವಹಣೆ, ಬಯಲು ಸೀಮೆ ಅಭಿವೃದ್ಧಿ ಮಂಡಳಿ ತಿದ್ದುಪಡಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ತಿದ್ದುಪಡಿ, ಮೈಸೂರು ಲ್ಯಾಂಪ್ಸ್ ವರ್ಕ್ಸ್‌ ಲಿ. ಮೌಲ್ಯಮಾಪನ ವಿಧಾನವನ್ನು ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಕೃಷಿ ಮತ್ತು ತೋಟಗಾರಿಕಾ ಬೆಲೆಗಳ ಸ್ಥಿರೀಕರಣ ಮತ್ತು ಬೆಲೆ ನಿಗದಿ ಮಾಡಲು ಸಚಿವ ಸಂಪುಟ ಉಪಸಮಿತಿ ರಚನೆಗೆ ಅನುಮೋದನೆ. ಆರ್ಟಿಕಲ್ 371ಜೆ ಸಂಬಂಧ ವಿಶೇಷ ಅನುಷ್ಠಾನ ಪ್ತಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚನೆಗೆ ಅನುಮೋದನೆ ನೀಡಲಾಗಿದೆ.

suddiyaana