ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಬಂಪರ್ – ಹೊಸ ಆಫರ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕಳೆದ ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ ಪಂಚ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಿದೆ. ಗೃಹಲಕ್ಷ್ಮೀ, ಶಕ್ತಿ ಯೋಜನೆ, ಯುವ ನಿಧಿ, ಅನ್ನ ಭಾಗ್ಯ ಹಾಗೂ ಗೃಹ ಜ್ಯೋತಿ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದೆ. ಗೃಹಲಕ್ಷ್ಮೀ ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಸಿದೆ. ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ.
ಇದನ್ನೂ ಓದಿ: ಅಪ್ಪಂಗೆ ಹುಟ್ಟಿದ್ರೆ ತೊಡೆ ತಟ್ಟಿ ಬಾರೋ.. ಕಿಚ್ಚನ ಹುಟ್ಟುಹಬ್ಬದಂದು ಮ್ಯಾಕ್ಸ್ ಮಾಸ್ ಸಾಂಗ್ ಔಟ್!
ಹೌದು, ಗೃಹಲಕ್ಷ್ಮಿ ಯೋಜನೆ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಆಫರ್ ವೊಂದನ್ನ ಅನೌನ್ಸ್ ಮಾಡಿದ್ದಾರೆ.. ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಹೇಳಿದ್ದಾರೆ.
ಈ ಬಗ್ಗೆ ಸಚಿವೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ ಎಂದು ಅವರು ಉಲ್ಲೇಖಿಸಿದ್ದಾರೆ.
ಇನ್ನು ಮತ್ತೊಂದು ಸಂದೇಶದಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.