ರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರದಿಂದ ಶಾಕ್‌! – ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕ ಸ್ಥಗಿತ

ರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರದಿಂದ ಶಾಕ್‌! – ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕ ಸ್ಥಗಿತ

ರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರ ಬಿಗ್ ಶಾಕ್‌ ನೀಡಿದೆ. ಗೃಹಲಕ್ಷ್ಮೀ‌ ಯೋಜನೆ ಜಾರಿಯಾದ ಒಂದೇ ವಾರದಲ್ಲಿ ಯೋಜನೆ ನೋಂದಣಿಯನ್ನಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿಯನ್ನು ನೀಡಿದೆ. ಶೀಘ್ರದಲ್ಲಿಯೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ಇದುವರೆಗೂ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೋಂದಣಿಯಾದ ಎಲ್ಲ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ನೋಂದಣಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ಟ್ವೀಟ್‌ ಮಾಡಿತ್ತು. ಆದರೆ ಕೆಲವೇ ಹೊತ್ತಲ್ಲಿ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದೆ.

ಇದನ್ನೂ ಓದಿ: ನಾವೆಲ್ಲ ಹಿಂದೂಗಳು.. ಹಿಂದೂ ಧರ್ಮದ ವಿರುದ್ಧ ಮಾತಾಡಿಲ್ಲ..- ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್‌

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್‌ 30ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಯೋಜನೆಗೆ ಚಾಲನೆ ನೀಡಿ, ಗೃಹಿಣಿಯರ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ಈಗ ಯೋಜನೆಗೆ ಚಾಲನೆ ನೀಡಿ ಒಂದೇ ವಾರದಲ್ಲಿ ನೋಂದಣಿಯನ್ನು ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಾಡಿದ ಟ್ವೀಟ್‌  ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ. 1.28 ಕೋಟಿ ಫಲಾನುಭವಿಗಳ ಪೈಕಿ 1.13 ಕೋಟಿ ನೋಂದಣಿಯಾಗಿದೆ. 17 ಲಕ್ಷ ಫಲಾನುಭವಿಗಳು ಬ್ಯಾಂಕ್ ಅಕೌಂಟ್, ಕೆವೈಸಿ ಅಪ್ಡೇಟ್ ಮಾಡಿಸಿಲ್ಲ ಎಂದರು.

suddiyaana