ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್‌ನ್ಯೂಸ್‌ – ಮಹಿಳೆಯರಿಗಾಗಿ  ಸಹಕಾರ ಸಂಘ!

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್‌ನ್ಯೂಸ್‌ – ಮಹಿಳೆಯರಿಗಾಗಿ  ಸಹಕಾರ ಸಂಘ!

ರಾಜ್ಯ  ಸರ್ಕಾರ ಐದು ಗ್ಯಾರೆಂಟಿಗಳಲ್ಲಿ ಗೃಹಲಕ್ಷ್ಮೀ ಕೂಡ ಒಂದು. ಈ ಯೋಜನೆ ಮೂಲಕ ರಾಜ್ಯದ ಮಹಿಳೆ ಪ್ರತಿ ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ನೀಡಲಾಗ್ತಿದೆ. ಇದೀಗ ಈ ಯೋಜನೆ ಯಶಸ್ವಿಯಾಗ್ತಿದ್ದಂತೆ ಮಹಿಳೆಯರಿಗೆ ಸರ್ಕಾರದಿಂದ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗ್ತಿದೆ.

ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪ – ಪಿಇಎಸ್​  ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ರೈಡ್

ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ. ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರಿಂದ ಅವರಿಗೆ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ, ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯದಶಮಿ. ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ಕೊಟ್ಟವರು ಮಹಿಳೆಯರು. ಹಿಂದೆ ರಾಜರು ಆಳ್ವಿಕೆ ಮಾಡುತ್ತಿದ್ದರು. ಆದರೆ ಈಗ ಸರ್ಕಾರ ಬಹಳ ವಿಜೃಂಭಣೆಯಿಂದ ದಸರಾ ಆಚರಿಸುತ್ತಾ ಬರುತ್ತಿದೆ  ಎಂದು ತಿಳಿಸಿದರು.

Shwetha M