ರಾಜ್ಯದ ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್!‌ – ಮಹಿಳೆಯರಿಗಾಗಿ ಹೊಸ ಸೇವೆ ಆರಂಭ!

ರಾಜ್ಯದ ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್!‌ – ಮಹಿಳೆಯರಿಗಾಗಿ ಹೊಸ ಸೇವೆ ಆರಂಭ!

ರಾಜ್ಯದ ಗೃಹಲಕ್ಷ್ಮಿ ಯೋಜನೆಯಡಿ ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ ಹಣ ನೀಡಲಾಗ್ತಿದೆ. ಆದ್ರೆ ಕಳೆದ ಕೆಲ ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದೀಗ ಸಹಾಯವಾಣಿಯನ್ನ ಆರಂಭಿಸಿದೆ.

ಇದನ್ನೂ ಓದಿ:ಅವರನ್ನೇ ಮದ್ವೆಯಾಗ್ತೇನೆ ಎಂದ ನಮೃತಾ ಗೌಡ – ಕಾರ್ತಿಕ್ ಮಹೇಶ್‌ ಜೊತೆ ಲವ್, ಮದುವೆ ಗಾಸಿಪ್ ನಿಜನಾ!?

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯ ಬಾಕಿ ಕಂತಿನ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ. ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಸುಮಾರು 5500 ಕೋಟಿ ರೂಪಾಯಿಗಳಷ್ಟು ದೊಡ್ಡ ಮೊತ್ತದ ಹಣ ಫಲಾನುಭವಿಗಳಿಗೆ ಇನ್ನೂ ಪಾವತಿಯಾಗಿಲ್ಲ. ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದಲ್ಲಿಯೂ ಈ ಬಗ್ಗೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಸದನ ಮುಗಿದು ವಾರ ಕಳೆದರೂ ಹಣ ಬಿಡುಗಡೆಯ ಬಗ್ಗೆ ಯಾವುದೇ ಅಧಿಕೃತ ಸೂಚನೆ ಬಂದಿಲ್ಲ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು-ನಾಳೆ ಎಂದು ಹೇಳುತ್ತಾ ಕಾಲ ತಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಇದೀಗ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯವಾಣಿ ಆರಂಭಿಸಿದೆ.

ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಮಹಿಳೆಯರು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಆದ್ರೆ ಇನ್ಮುಂದೆ ಹಣ ಜಮೆಯಾಗದ ಬಗ್ಗೆ ಮಹಿಳೆಯರು ಕಚೇರಿಗೆ ಹೋಗಬೇಕಿಲ್ಲ. ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇದೀಗ ‘181’ ಸಹಾಯವಾಣಿಯನ್ನು ಆರಂಭಿಸಿದೆ. 181 ಕ್ಕೆ ಕರೆ ಮಾಡಿದರೆ, ಸಂಬಂಧಪಟ್ಟ ಅಧಿಕಾರಿಗಳು ನಿಮ್ಮ ತಾಲೂಕಿನ ಮಾಹಿತಿ ಪಡೆದು ಸಮಸ್ಯೆಗೆ ಇರುವ ಕಾರಣ ಮತ್ತು ಪರಿಹಾರದ ಬಗ್ಗೆ ಮಾಹಿತಿ ನೀಡಲಿದ್ದಾರೆ.  ಗಮನಿಸಬೇಕಾದ ವಿಷಯ ಏನೆಂದರೆ ದಿನದ 24 ಗಂಟೆಯೂ ಇದು ಕಾರ್ಯನಿರ್ವಹಿಸುತ್ತದೆ. ಇಷ್ಟೇ ಅಲ್ಲದೆ ಕಚೇರಿ ಅಥವಾ ಮನೆಯಲ್ಲಿ ಲೈಂಗಿಕ ಕಿರುಕುಳ ಸಮಸ್ಯೆ ಇದ್ದರೆ, ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ ಹೀಗೆ ಮಹಿಳೆಯರ ಮೇಲೆ ಯಾವುದೇ ತೊಂದರೆ ಆದರೂ ಈ ನಂಬರ್‌ಗೆ ಕರೆ ಮಾಡಬಹುದಾಗಿದೆ.

Shwetha M