ಮಾರ್ಚ್ನಲ್ಲಿ 1.96 ಲಕ್ಷ ಕೋಟಿ GST ಸಂಗ್ರಹ – ಎರಡನೇ ಸ್ಥಾನದಲ್ಲಿ ಕರ್ನಾಟಕ

ಮಾರ್ಚ್ನಲ್ಲಿ 1.96 ಲಕ್ಷ ಕೋಟಿ GST ಸಂಗ್ರಹ – ಎರಡನೇ ಸ್ಥಾನದಲ್ಲಿ ಕರ್ನಾಟಕ

ಮಾರ್ಚ್‌ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹವು 1.96 ಲಕ್ಷ ಕೋಟಿ ತಲುಪಿದೆ. ಇದು ಜಿಎಸ್ಟಿ ನೀತಿ ಜಾರಿಯಾದ ಬಳಿಕ ದಾಖಲಾದ 2ನೇ ಗರಿಷ್ಠ ತೆರಿಗೆ ಪ್ರಮಾಣವಾಗಿದ್ದು, ಕಳೆದ ವರ್ಷದ ಮಾರ್ಚ್‌ಗೆ ಹೋಲಿಸಿದರೆ ಶೇ.9.9ರಷ್ಟು ಹೆಚ್ಚಾಗಿದೆ.  ದೇಶೀಯ ವರ್ಗಾವಣೆಗಳ ಮೂಲಕ 1.49 ಲಕ್ಷ ಕೋಟಿ ರು., ಆಮದಿತ ಸರಕುಗಳಿಂದ 46,919 ಕೋಟಿ ರು. ಜಿಎಸ್ಟಿ ಸಂಗ್ರಹವಾಗಿದೆ. ಈ ಪೈಕಿ ಕೇಂದ್ರೀಯ ಜಿಎಸ್ಟಿ 38145 ಕೋಟಿ ರು., ರಾಜ್ಯ ಜಿಎಸ್ಟಿ 49891 ಕೋಟಿ ರು., ಸಂಯೋಜಿತ ಜಿಎಸ್ಟಿ 95853 ಕೋಟಿ ರು. ಮತ್ತು ಸೆಸ್‌ ಮೂಲಕ 12253 ಕೋಟಿ ರು. ಸಂಗ್ರಹವಾಗಿದೆ.

ಎರಡನೇ ಸ್ಥಾನದಲ್ಲಿ ಕರ್ನಾಟಕ

ಇನ್ನು 31534 ಕೋಟಿ ರು. ಸಂಗ್ರಹದೊಂದಿಗೆ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ರೆ, 13497 ಕೋಟಿ ರು.ನೊಂದಿಗೆ ಕರ್ನಾಟಕ 2ನೇ ಸ್ಥಾನದಲ್ಲಿದೆ. 11795 ಕೋಟಿ ರು. ಜಿಎಸ್ಟಿ ಸಂಗ್ರಹದೊಂದಿಗೆ ತಮಿಳುನಾಡು 3ನೇ ಸ್ಥಾನದಲ್ಲಿದೆ.

Kishor KV