ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್! – HDK ವಿರುದ್ಧ ಕಿಡಿ ಕಾರಿದ ಜಿಟಿಡಿ

ಮಾಜಿ ಸಚಿವ ಜಿಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ ಜಿಟಿ ದೇವೇಗೌಡ ಹೆಚ್‌ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಅವರು ಸಿಎಂ ಆಗುವ ಕನಸಿನೊಂದಿಗೆ ಪಕ್ಷ ಕಟ್ಟಲು ಹೊರಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೈಫೈ ಸೌಲಭ್ಯ ಕೇಸ್! – ಸೆಂಟ್ರಲ್ ಜೈಲಿಗೆ ಹೊಸ ಮುಖ್ಯ ಅಧೀಕ್ಷರ ನೇಮಕ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಜಿಟಿ ದೇವೇಗೌಡ, ಎಚ್.ಡಿ.ಕುಮಾರಸ್ವಾಮಿಯವರು ಆರೋಗ್ಯ ಸರಿ ಮಾಡಿಕೊಂಡು ಜೆಡಿಎಸ್ ಕಟ್ಟಲು ಮುಂದಾಗಿದ್ದಾರೆ. ಸಿಎಂ ಆಗುವ ಕನಸಿನೊಂದಿಗೆ ಪಕ್ಷ ಕಟ್ಟಲು ಹೊರಟ್ಟಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹೇಳಿದ್ದಾರೆ.
ನಾನು, ಸಿದ್ದರಾಮಯ್ಯ 25 ವರ್ಷ ಜೆಡಿಎಸ್ ಪಕ್ಷವನ್ನು ಗಟ್ಟಿಯಾಗಿ ಕಟ್ಟಿದ್ದೇವೆ. ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಹೋದ ಮೇಲೆ ದೇವೇಗೌಡರ ಜೊತೆ ಪಕ್ಷ ಕಟ್ಟಿದ್ದೆ. ಆರ್ಥಿಕವಾಗಿ ಜಿ.ಟಿ.ದೇವೇಗೌಡ ಬಲಹೀನವಾಗಿರುವುದು ಕುಮಾರಸ್ವಾಮಿಗೆ ಗೊತ್ತಾಗಿದೆ. ಈಗ ಕುಮಾರಸ್ವಾಮಿ ಕೇಂದ್ರ ಸಚಿವರು, ಶಕ್ತಿವಂತರಾಗಿದ್ದಾರೆ. ಯಾರು ಇರದೆ ಇದ್ದರೂ ಪಕ್ಷ ಕಟ್ಟುತ್ತೇನೆ ಎಂಬ ವಿಶ್ವಾಸ ಅವರಿಗೆ ಬಂದಿದೆ. ನಾನು ಈಗಲೂ ಜನತಾದಳದಲ್ಲೇ ಇದ್ದೀನಿ, ಇರ್ತಿನಿ. ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಹೋದಾಗ ಜಿ.ಟಿ.ದೇವೇಗೌಡನ ಸಂಘಟನೆ ಶಕ್ತಿ ಬೇಕಾಗಿತ್ತು. ಈಗ ಬೇಕಾಗಿಲ್ಲ ಅನ್ನಿಸುತ್ತೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೈ ಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷದ ನಾಯಕನನ್ನಾಗಿ ನನ್ನ ಮಾಡದೆ ಇದ್ದಾಗ ನನಗೆ ಬೇಸರವಾಯಿತು. ಅಂದು ಮನಸ್ಸಿಗೆ ನೋವಾಗಿ ಪಕ್ಷದ ಯಾವುದೇ ಸಭೆಗಳಲ್ಲಿ ಭಾಗವಹಿಸಿಲ್ಲ. ಕೋರ್ ಕಮಿಟಿ ಅಧ್ಯಕ್ಷನನ್ನಾಗಿ ಮಾಡಿದಾಗ ಇಡೀ ರಾಜ್ಯ ಸುತ್ತಿ ಸಭೆ ಮಾಡಿದ್ದೇನೆ. ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ನನ್ನ ಕೈ ಬಿಟ್ಟಿದ್ದಕ್ಕೆ ನನಗೆ ಯಾವುದೇ ಬೇಸರ ಇಲ್ಲ ಎಂದರು.

ನೋಡಿರಿ

