ಮಿನಿ ಸಮರ: ಗುಜರಾತ್ ನಲ್ಲಿ ಮುನ್ನಡೆ ಸಾಧಿಸಿದ ಬಿಜೆಪಿ

ಮಿನಿ ಸಮರ: ಗುಜರಾತ್ ನಲ್ಲಿ ಮುನ್ನಡೆ ಸಾಧಿಸಿದ ಬಿಜೆಪಿ

ನವದೆಹಲಿ : ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ನಿರೀಕ್ಷೆಯಂತೆ ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.

ಪ್ರಾಥಮಿಕ ವರದಿಯ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ 152 ಮತ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 19, ಆಪ್ 7, ಪಕ್ಷೇತರ4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್ ಮುನ್ನಡೆಯಲ್ಲಿದ್ದಾರೆ. ಈ ಹಿಂದೆ ಬಿಜೆಪಿಗೆ ಕಷ್ಟಕರವೆಂದು ಪರಿಗಣಿಸಲಾದ ಅಂಕಲಾವ್, ಅಂಕಲೇಶ್ವರ, ಗಿರ್ ಸೋಮನಾಥ್, ಚೋಟಾ ಉದೇಪುರ್ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೋರಸಡ್, ಲುನವಾಡದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ಕಳೆದ ಅಕ್ಟೋಬರ್‌ನಲ್ಲಿ 140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೋರ್ಬಿ ತೂಗು ಸೇತುವೆ ದುರಂತ ಸಂದರ್ಭ ತನ್ನ ಜೀವದ ಹಂಗನ್ನು ತೊರೆದು ನೀರಿಗೆ ಬಿದ್ದ ಜನರ ರಕ್ಷಣೆಗೆ ನದಿಗೆ ಹಾರಿದ್ದ ಕಾಂತಿಲಾಲ್ ಅಮೃತಿಯಾ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿತ್ತು ಅದರಂತೆ ಫಲಿತಾಂಶದಲ್ಲಿ ಭಾರಿ ಮುನ್ನಡೆ ಸಾಧಿಸಿದ್ದಾರೆ.

ಗುಜರಾತ್ ನಲ್ಲಿ ಕಳೆದ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಬಹುಮತ ಗಳಿಸುವ ವಿಶ್ವಾಸದಲ್ಲಿದೆ. 2017ರಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳಲ್ಲಿ ಜಯಭೇರಿ ಸಾಧಿಸಿ, 6ನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಅಲ್ಲದೇ ಕಾಂಗ್ರೆಸ್ 77 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಆದರೆ ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 158 ಸ್ಥಾನಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಕೇವಲ 16 ಸ್ಥಾನಗಳಲ್ಲಷ್ಟೇ ಮುನ್ನಡೇ ಸಾಧಿಸಿ ಭಾರೀ ಮುಖಭಂಗ ಅನುಭವಿಸುವಂತಾಗಿದೆ.

suddiyaana