ತವರು ಮೈದಾನದಲ್ಲೇ ಸೋತ ಬೆಂಗಳೂರು- RCB ಹ್ಯಾಟ್ರಿಕ್ ಗೆಲುವಿನ ಕನಸಿಗೆ ಕೊಳ್ಳಿ

ಆರ್‌ಸಿಬಿಯು ತವರು ಮೈದಾನವಾದ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ. ಗುಜರಾತ್ ಟೈಟಾನ್ಸ್ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಸಾಧಾರಣ 169 ರನ್‌ಗಳನ್ನು ಬಾರಿಸಿತು. ಈ ಮೂಲಕ ಗುಜರಾತ್‌ಗೆ 170 ಸಾಧಾರಣ ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನತ್ತಿದ ಗುಜರಾತ್ 17.5 ಓವರ್‌ನಲ್ಲಿ 170 ರನ್‌ಗಳನ್ನು ಬಾರಿಸಿ ಗೆಲುವು ಸಾಧಿಸಿತು.
ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ಎರಡನೇ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿದ್ದ ಆರ್‌ಸಿಬಿಯ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ. ಗುಜರಾತ್ ವಿರುದ್ಧ ಸೋಲನುಭವಿಸುವ ಮೂಲಕ ಹ್ಯಾಟ್ರಿಕ್ ಗೆಲುವು ಕೈತಪ್ಪಿದಂತಾಗಿದೆ. ಗುಜರಾತ್ ಪರ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿ ಅರ್ಧಶತಕ ಸಿಡಿಸಿದರು. ಈ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ