ಚಾಮರಾಜನಗರ ಜಿಲ್ಲೆಯ ದೇಗುಲಕ್ಕೆ ಕಳ್ಳರ ಕಾಟ- ಮಾರಮ್ಮ ದೇವಸ್ಥಾನದಲ್ಲಿ 4 KG ಬೆಳ್ಳಿ, 30 ಗ್ರಾಂ ಚಿನ್ನಕ್ಕೆ ಕನ್ನ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ಹಬ್ಬ ಮುಗಿದ ಮೂರೇ ದಿನಕ್ಕೆ ದೇವಸ್ಥಾನದ ಬಾಗಿಲೂ ಮೀಟಿ 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣ ದೋಚಿ ಕಳ್ಳರು ಪರಾರಿ ಆಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕಳ್ಳರ ಕೈಚಳಕ ಮುಂದುವರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಬಸವೇಶ್ವರ ಮತ್ತು ಮಾರಮ್ಮ ದೇವಸ್ಥಾನದ ಬಾಗಿಲುಗಳನ್ನು ಮೀಟಿ ಕಳ್ಳತನ ಮಾಡಲಾಗಿದೆ. ಹಬ್ಬ ಮುಗಿದು ಮೂರೇ ದಿನಕ್ಕೆ ದೇಗುಲದಲ್ಲಿದ್ದ 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣ ದೋಚಿ ಕಳ್ಳರು ಪರಾರಿ ಆಗಿದ್ದಾರೆ.
ಇದನ್ನೂ ಓದಿ: ಭಾಗ್ಯಲಕ್ಷ್ಮೀ ಶೂಟಿಂಗ್ ವೇಳೆ ನಟಿ ಸುಷ್ಮಾ ರಾವ್ ತಲೆಗೆ ಪೆಟ್ಟು! – ನಟಿಗೆ ಏನಾಯ್ತು?
ಕಳ್ಳರು ದೋಚುವ ಮುಂಚೆ ಮೊದಲು ಸಿಸಿಟಿವಿ ಕ್ಯಾಮೆರಾದ ಹಾರ್ಡಿಸ್ಕ್ ಎಗರಿಸಿದ್ದಾರೆ. ಕಳ್ಳತನ ಸುಳಿವಿಲ್ಲದಂತೆ ಖದೀಮರು ಕೃತ್ಯವೆಸಗಿದ್ದಾರೆ. ಸದ್ಯ ಗ್ರಾಮಸ್ಥರು ಕೃತ್ಯ ಪೂರ್ವ ನಿಯೋಜಿತ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿದ್ದು, ಜೊತೆಗೆ ಡಾಗ್ ಸ್ಕೋಡ್, ಬೆಳರಚ್ಚು ತಜ್ಞರಿಂದ ತೀವ್ರ ಪರಿಶೀಲನೆ ಮಾಡಲಾಗಿದೆ.
ಬೀದರ್ ಜಿಲ್ಲೆಯಲ್ಲಿ ವಿವಿಧ ಕಡೆ ಕಳ್ಳತನ ಪ್ರಕರಣಗಳು ನಡೆದಿವೆ. ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ನಡೆದಿವೆ. ಚಿಟಗುಪ್ಪಾ ತಾಲೂಕಿನ ಮಂಗಲಗಿ, ಮುಸ್ತರಿವಾಡಿ ಹಾಗೂ ಮುತ್ತಂಗಿ ಗ್ರಾಮಗಳಲ್ಲಿ ಕಳ್ಳರು ಕೈಚಳಕ ತೋರಿದ್ದರು. ಮಂಗಲಗಿ ಗ್ರಾಮದ ಲಕ್ಷ್ಮೀ ದೇವಸ್ಥಾನ ಹಾಗೂ ಮುಸ್ತರಿವಾಡಿಯ ಭವಾನಿ ದೇವಸ್ಥಾನಗಳಲ್ಲಿ ಕಳ್ಳರು ನುಗ್ಗಿ ದೇವಿಯ ಕೊರಳಲ್ಲಿದ್ದ ತಾಳಿ ಕದ್ದು ಪರಾರಿಯಾಗಿದ್ದಾರೆ.

ನೋಡಿರಿ

