ಮಣಿಪುರದಲ್ಲಿ ಸೇನೆಯ ಬಿಗ್‌ ಆಪರೇಷನ್‌ – 10 ಉಗ್ರರ ಎನ್‌ಕೌಂಟರ್‌

ಮಣಿಪುರದಲ್ಲಿ ಸೇನೆಯ ಬಿಗ್‌ ಆಪರೇಷನ್‌ – 10 ಉಗ್ರರ ಎನ್‌ಕೌಂಟರ್‌

ಭಾರತೀಯ ಸೇನೆ ಉಗ್ರರ ಬೇಟೆಯಾಡುವುದನ್ನು ಮುಂದುವರಿಸಿದೆ. ಇದೀಗ ಮಣಿಪುರದ  ಚಾಂದೆಲ್‌ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ಘಟಕದೊಂದಿಗಿನ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Gaza ಆಸ್ಪತ್ರೆ ಮೇಲೆ Israel ಏರ್ ಸ್ಟ್ರೈಕ್, Hamas ಮುಖ್ಯಸ್ಥ ಮೊಹಮ್ಮದ್ ಸಿನ್ವಾರ್ ಸಾವು!

ಸೇನೆಯ ಪೂರ್ವ ಕಮಾಂಡ್ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು ಕಾರ್ಯಾಚರಣೆ ನಡೆಸಿತು ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಕಾರ್ಯಾಚರಣೆಯ ಸಮಯದಲ್ಲಿ ಉಗ್ರರು, ಪಡೆಗಳ ಮೇಲೆ ಗುಂಡು ಹಾರಿಸಿದರು. ಅದಕ್ಕೆ ಸೇನಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. ಗುಂಡಿನ ಚಕಮಕಿಯಲ್ಲಿ 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M

Leave a Reply

Your email address will not be published. Required fields are marked *