ಶ್ರೀರಾಮ ಪ್ರಾಣಪ್ರತಿಷ್ಠೆಯ ದಿನ ಅರ್ಧ ದಿನ ರಜೆ – ಪ್ರಧಾನಿ ಮೋದಿ ಕೇಂದ್ರ ಸಚಿವರಿಗೆ ನೀಡಿದ ಸೂಚನೆಯೇನು?
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆ ದಿನ ಕೇಂದ್ರ ಸರ್ಕಾರ ಅರ್ಧದಿನ ರಜೆ ಘೋಷಿಸಿದೆ. ಕೇಂದ್ರ ಸರ್ಕಾರ ಈಗಾಗ್ಲೇ ಅರ್ಧ ದಿನ ರಜೆ ಘೋಷಿಸಿ ಆದೇಶ ಹೊರಡಿಸಿದೆ. ರಾಮಮಂದಿರ ಲೋಕಾರ್ಪಣೆಯ ಸಂಭ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಿ ನೌಕರರು ಭಾವನಾತ್ಮಕವಾಗಿ ಸರ್ಕಾರವನ್ನು ಆಗ್ರಹಿಸಿದ್ದರು. ಇದೇ ಕಾರಣಕ್ಕಾಗಿ ಅರ್ಧ ದಿನ ರಜೆ ಘೋಷಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಎರಡು ಸೂಪರ್ ಓವರ್ ನೋಡಿದ ಅಭಿಮಾನಿಗಳಿಗೆ ಸಂಭ್ರಮ – ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
ಕೇಂದ್ರ ಸರ್ಕಾರದ ಎಲ್ಲಾ ಕಚೇರಿಗಳು, ಕೇಂದ್ರ ಸರ್ಕಾರದ ಸಂಸ್ಥೆಗಳು, ಕೇಂದ್ರ ಸರ್ಕಾರ ಸ್ವಾಮ್ಯದ ಎಲ್ಲಾ ಸಂಸ್ಥೆಗಳಿಗೂ ಜನವರಿ 22ರಂದು ಅರ್ಧ ದಿನ ರಜೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಜನವರಿ 22ರಂದು ಮಧ್ಯಾಹ್ನ ಶ್ರೀರಾಮ ಮಂದಿರದಲ್ಲಿ ಬಾಲರಾಮನ ವಿಗ್ರಹದ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ ಇದೇ ಕಾರಣದಿಂದ ಜನವರಿ 22ರಂದು ಬೆಳಗ್ಗೆಯಿಂದ ಮಧ್ಯಾಹ್ನದ ನಂತರ 2.30ರವರೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಿದೆ. ಆದರೆ 2.30ರ ನಂತರ ಕೇಂದ್ರ ಸರ್ಕಾರದ ಎಲ್ಲಾ ಕಚೇರಿಗಳು ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ನೀಡಲಾಗಿದೆ.
ಕರ್ನಾಟಕದಲ್ಲೂ ರಜೆ ಕೊಡ್ತಾರಾ?
ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡುತ್ತಿದ್ದಂತೆ ಕರ್ನಾಟಕದಲ್ಲೂ ರಾಮಮಂದಿರ ಲೋಕಾರ್ಪಣೆಯ ದಿನ ರಜೆ ಕೊಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈಗಾಗ್ಲೇ ಬಿಜೆಪಿ ನಾಯಕರು ರಾಜ್ಯದಲ್ಲಿ ಜನವರಿ 22ರಂದು ರಜೆ ನೀಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಈಗ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಿರುವುದರಿಂದ ಕರ್ನಾಟಕದಲ್ಲೂ ರಜೆ ಸಿಗುತ್ತದಾ ಎಂದು ನೋಡಬೇಕಿದೆ.