ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಸುರಂಗ! – ಹಮಾಸ್‌ ಉಗ್ರರ ಕೃತ್ಯ ಬಯಲು ಮಾಡಿದ ಇಸ್ರೇಲ್‌

ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಸುರಂಗ! – ಹಮಾಸ್‌ ಉಗ್ರರ ಕೃತ್ಯ ಬಯಲು ಮಾಡಿದ ಇಸ್ರೇಲ್‌

ಹಮಾಸ್‌ ಹಾಗೂ ಇಸ್ರೇಲ್‌ ನಡುವಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಮಾಸ್‌ ಉಗ್ರರನ್ನು ಸದೆಬಡಿಯಲು ಇಸ್ರೇಲ್‌ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಗಾಜಾ ನಗರದ ಮೇಲೆ ಇಸ್ರೇಲ್‌ ಮೇಲಿಂದ ಮೇಲೆ ದಾಳಿ ಮಾಡುತ್ತಲೇ ಇದೆ. ಹಮಾಸ್‌ ಉಗ್ರರು ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದ ದೊಡ್ಡ ಸುರಂಗವೊಂದು ಗಾಜಾದ ಆಸ್ಪತ್ರೆಯಡಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಇಸ್ರೇಲ್‌ ಪ್ರಜೆಗಳನ್ನು ಹಮಾಸ್‌ ಉಗ್ರರು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದೆ ಎಂದು ಇಸೇಲ್‌ ಸೇನೆ ಆರೋಪಿಸಿತ್ತು. ಇದೀಗ ಇಸ್ರೇಲ್‌ ಮೇಲೆ ದಾಳಿ ನಡೆಸಿದ ಬಳಿಕ ಹಮಾಸ್‌ ಉಗ್ರರು ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದ ದೊಡ್ಡ ಸುರಂಗವೊಂದು ಗಾಜಾದ ಆಸ್ಪತ್ರೆಯಡಿ ಪತ್ತೆಯಾಗಿದೆ. ಈ ಸುರಂಗದ ವಿಡಿಯೋವನ್ನು ಇಸ್ರೇಲಿ ಸೇನೆ ಬಿಡುಗಡೆ ಮಾಡುವ ಮೂಲಕ ಹಮಾಸ್‌ ಉಗ್ರರ ಕೃತ್ಯವನ್ನು ಬಹಿರಂಗ ಮಾಡಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ ಪ್ರಕರಣ – ಐದು ವರ್ಷ 9 ಮೈತೇಯಿ ಉಗ್ರ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ

ಇಸ್ರೇಲ್‌ ಸೇನೆ ಆಸ್ಪತ್ರೆಯ ಮೇಲೆ ಏರ್‌ ಸ್ಟ್ರೈಕ್‌ ಮಾಡುವ ಮೂಲಕ ಮಗ್ದ ಮಕ್ಕಳನ್ನು ಹತ್ಯೆ ಮಾಡುತ್ತಿದೆ ಎಂದು ಹಮಾಸ್‌ ಹೇಳಿತ್ತು. ಆದರೆ ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿ, ಹಮಾಸ್‌ ಉಗ್ರರು ಆಸ್ಪತ್ರೆಯನ್ನು ರಕ್ಷಣಾ ಕವಚವನ್ನಾಗಿ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಈಗ ಸುರಂಗದ ವಿಡಿಯೋವನ್ನು ಇಸ್ರೇಲ್‌ ಬಿಡುಗಡೆ ಮಾಡುವ ಮೂಲಕ ಹಮಾಸ್‌ ಉಗ್ರರ ಬಣ್ಣವನ್ನು ಬಯಲು ಮಾಡಿದೆ.

ಗಾಜಾದಲ್ಲಿನ ರಾಂಟಿಸ್ಸಿ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಸಂಗ್ರಹಿಸಿಟ್ಟಿರುವ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್‌ ಸೈನ್ಯದ ವಕ್ತಾರ ಹೇಳಿಕೊಳ್ಳುವ ವೀಡಿಯೊ ಮತ್ತು ಫೋಟೋಗಳನ್ನು ಇಸ್ರೇಲಿ ಮಿಲಿಟರಿ ರಿಲೀಸ್‌ ಮಾಡಿದೆ.

ರಾಂಟಿಸ್ಸಿ ಆಸ್ಪತ್ರೆ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಶೇಷ ಮಕ್ಕಳ ಆಸ್ಪತ್ರೆಯಾಗಿದ್ದು ಇಲ್ಲಿ ಗ್ರೆನೇಡ್‌ಗಳು ಮತ್ತು ಇತರ ಸ್ಫೋಟಕಗಳು ಪತ್ತೆಯಾಗಿದೆ. ಇಲ್ಲಿ ಸಣ್ಣ ಸಣ್ಣ ಅಡುಗೆಮನೆ ಇದ್ದು, ಸುರಂಗದ ಬಳಿಯಲ್ಲೇ ಹಿರಿಯ ಹಮಾಸ್ ಕಮಾಂಡರ್ ಮನೆ ಇತ್ತು ಎಂದು ಹೇಳಲಾಗುತ್ತಿದೆ.

Shwetha M