3ನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್‌!

3ನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್‌!

ಹಮಾಸ್‌ ಹಾಗೂ ಇಸ್ರೇಲ್‌ ನಡುವಿನ ಕದನ ವಿರಾಮ ಒಪ್ಪಂದದಂತೆ ಹಮಾಸ್‌ ಉಗ್ರರು ಮೂರನೇ ಹಂತದಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದಾರೆ. ಮೂರನೇ ಹಂತದಲ್ಲಿ 14 ಇಸ್ರೇಲಿ ಮತ್ತು ಅಮೆರಿಕಾದ ಓರ್ವ ಪ್ರಜೆ ಸೇರಿ ಒಟ್ಟು 17 ಮಂದಿ ಒತ್ತೆಯಾಳುಗಳನ್ನು ಹಮಾಸ್‌ ಬಂಡುಕೋರರು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: 2 ತಿಂಗಳ ಬಳಿಕ 25 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಶುಕ್ರವಾರ (ನವೆಂಬರ್ 24) ರಂದು ಪ್ರಾರಂಭವಾಯಿತು. ಇದರಂತೆ ಹಮಾಸ್ ಹಾಗೂ ಇಸ್ರೇಲ್‌ ನಡುವಿನ ಒಪ್ಪಂದದನ್ವಯ 3 ಹಾಗೂ 1ರ ಅನುಪಾತದಲ್ಲಿ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಅಂದರೆ ಹಂತ, ಹಂತವಾಗಿ ಹಮಾಸ್‌ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್‌ನಿಂದ 150 ಪ್ಯಾಲೆಸ್ಟೀನ್‌ ಕೈದಿಗಳ ಬಿಡುಗಡೆ ಕುರಿತಂತೆ ಒಪ್ಪಂದ ಆಗಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್‌ ಬಂಡುಕೋರರು ಮೂರನೇ ಹಂತದಲ್ಲಿ 17 ಮಂದಿ ಒತ್ತೆಯಾಳುಗಳ ಬಿಡುಗಡೆಯನ್ನು ಹಮಾಸ್ ಮಾಡಿದ್ದೂ ಅದಕ್ಕೆ ಪ್ರತಿಯಾಗಿ ಇಸ್ರೇಲ್ 39 ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು, ಗಾಜಾ ಪಟ್ಟಿಗೆ ತೆರಳಿ ಸೈನಿಕರಿಗೆ ಸ್ಫೂರ್ತಿ ತುಂಬಿದರು. ಈ ವೇಳೆ ಮಾತನಾಡಿದ ಅವರು, ಮೊದಲು ಹಮಾಸ್​ ಅನ್ನು ನಾಶ ಮಾಡುವುದು ಹಾಗೂ ಎರಡನೆಯದು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಮರಳಿ ತರುವುದು ನಮ್ಮ ಮೂಲ ಉದ್ದೇಶ ಎಂದು ಹೇಳಿದರು.

Shwetha M