ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್! – ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ ಹಂಪಿ ಉತ್ಸವ-2026

ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಾರಿ ಹಂಪಿ ಉತ್ಸವ ಫೆಬ್ರವರಿ 13, 14 ಹಾಗೂ 15ರಂದು ಮೂರು ದಿನಗಳ ಕಾಲ ನಡೆಯಲಿದೆ.
ಇದನ್ನೂ ಓದಿ:ಹೋಗೇ, ಬಾರೇ ಅನ್ನಬಾರದಿತ್ತು.. ತುಂಬಾ ನೋವು ಮಾಡಿದ್ದೀನಿ! – ಅಶ್ವಿನಿ ಗೌಡ ಬಳಿ ಕ್ಷಮೆ ಕೇಳಿದ ಗಿಲ್ಲಿ!
ಪ್ರತಿವರ್ಷದಂತೆ ಈ ಬಾರಿಯೂ ಹಂಪಿ ಉತ್ಸವ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ. ಇದೀಗ ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಲಾಗಿದೆ. ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಫೆಬ್ರವರಿ 13ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಉತ್ಸವದ ಅಂಗವಾಗಿ ಕಲೆ, ಚಿತ್ರಕಲೆ, ವಾಸ್ತುಶಿಲ್ಪ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆ, ಸುಗಮ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸ್ಥಳೀಯ ಕಲಾವಿದರಿಂದ ವಿಜಯನಗರ ಸಾಮ್ರಾಜ್ಯದ ಆಡಳಿತ ಗತವೈಭವ ಕುರಿತ ಧ್ವನಿ ಬೆಳಕು ಪ್ರದರ್ಶನ ಮಾಡಲಾಗುತ್ತದೆ. ಇದಿಷ್ಟೇ ಅಲ್ಲದೇ ಉತ್ಸವದಲ್ಲಿ ವಿಶೇಷವಾಗಿ ಮುಂಬೈ ತಾಂತ್ರಿಕ ಕಲಾಬಳಗದಿಂದ ಮೂರು ಸಾವಿರ ಡ್ರೋನ್ ಬಳಸಿ ಡ್ರೋನ್ ಶೋ ಏರ್ಪಡಿಸಲಾಗಿದೆ. ಗಾಳಿಪಟ ಉತ್ಸವ ಕೂಡ ಆಯೋಜಿಸಲಾಗಿದೆ.

ನೋಡಿರಿ

