ದೇವಸ್ಥಾನದಲ್ಲೂ ಅಂಟಿಕೊಂಡೇ ಪೂಜೆ ಸಲ್ಲಿಸಿದ ಹಾರ್ದಿಕ್ ಪಾಂಡ್ಯ -ಮಹಿಕಾ ಜೋಡಿ

ದೇವಸ್ಥಾನದಲ್ಲೂ ಅಂಟಿಕೊಂಡೇ ಪೂಜೆ ಸಲ್ಲಿಸಿದ ಹಾರ್ದಿಕ್ ಪಾಂಡ್ಯ  -ಮಹಿಕಾ  ಜೋಡಿ

ಹಾರ್ದಿಕ್ ಪಾಂಡ್ಯ ಮತ್ತು ನಟಿ ಮಾಹಿಕಾ ಶರ್ಮಾ  ದೇವಸ್ಥಾನದಲ್ಲಿ ಒಂದೇ ಶಾಲನ್ನು ಹಂಚಿಕೊಂಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಗೆಳತಿ, ನಟಿ ಮಾಹಿಕಾ ಶರ್ಮಾ ಅವರು ಮುಂಬೈನ ಸುಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಈ ಜೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಹಾರ್ದಿಕ್ ಮತ್ತು ಮಾಹಿಕಾ ಒಂದೇ ಶಾಲನ್ನು ಹಂಚಿಕೊಂಡಿರುವುದು ನೆರೆದಿದ್ದವರ ಗಮನ ಸೆಳೆಯಿತು. ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದ ಈ ಜೋಡಿಯ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ.

ಇದನ್ನೂ ಓದಿ: ಅಕ್ಷರ ಸಂತ ಹರೇಕಳ ಹಾಜಬ್ಬ ಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್!

ಹಾರ್ದಿಕ್ ಸಾಂಪ್ರದಾಯಿಕ ಕುರ್ತಾ ಧರಿಸಿದ್ದರೆ, ಮಾಹಿಕಾ ಶರ್ಮಾ ಸಲ್ವಾರ್ ಸೂಟ್‌ನಲ್ಲಿ ಕಂಗೊಳಿಸಿದರು. ಭಕ್ತರೊಂದಿಗೆ ಹಾರ್ದಿಕ್ ಹಸ್ತಲಾಘವ ಮಾಡಿ ಆತ್ಮೀಯವಾಗಿ ಮಾತನಾಡಿದರು. ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಮತ್ತು ಮಾಹಿಕಾ ಡೇಟಿಂಗ್ ಮಾಡುತ್ತಿರುವ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದವು. ಇತ್ತೀಚೆಗೆ ಮಾಹಿಕಾ ಕೈಬೆರಳಲ್ಲಿ ವಜ್ರದ ಉಂಗುರ ಕಂಡಿದ್ದರಿಂದ ಇವರಿಬ್ಬರ ನಿಶ್ಚಿತಾರ್ಥವಾಗಿದೆಯೇ ಎಂಬ ಚರ್ಚೆಯೂ ನಡೆದಿತ್ತು. ಆದರೆ ಮಾಹಿಕಾ ಅದನ್ನು ನಿರಾಕರಿಸಿದ್ದರು.

ವಿಶೇಷವೆಂದರೆ, ಹಾರ್ದಿಕ್ ಅವರ ಮಾಜಿ ಪತ್ನಿ ನತಾಶಾ ಸ್ಟಾಂಕೋವಿಕ್ ಅವರ 34ನೇ ಹುಟ್ಟುಹಬ್ಬದಂದೇ ಈ ಜೋಡಿ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಕುತೂಹಲ ಮೂಡಿಸಿದೆ. ಮಾಹಿಕಾ ಶರ್ಮಾ ಭಾರತೀಯ ದೂರದರ್ಶನ ಮತ್ತು ಚಲನಚಿತ್ರ ರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಹಾಗೂ ಮಾಡೆಲ್ ಮಾಹಿಕಾ ಅವರು ಅಸ್ಸಾಂನವರು. ಅವರು ತಮ್ಮ ವೃತ್ತಿಜೀವನವನ್ನು ಮಾಡೆಲಿಂಗ್ ಮೂಲಕ ಆರಂಭಿಸಿದರು ಮತ್ತು ‘ಮಿಸ್ ಟೀನ್ ನಾರ್ತ್ ಈಸ್ಟ್’ ಪ್ರಶಸ್ತಿಯನ್ನು ಗೆದ್ದಿದ್ದಾರೆ.

Kishor KV