12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ – ಕೊಡವ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಹರ್ಷಿಕಾ, ಭುವನ್‌

12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ – ಕೊಡವ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಹರ್ಷಿಕಾ, ಭುವನ್‌

ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್‌ ಪೊನ್ನಣ್ಣ 12 ವರ್ಷಗಳ ಪ್ರೀತಿಗೆ ಈಗ ಮದುವೆಯ ಮುದ್ರೆ ಒತ್ತಿದ್ದಾರೆ. ಗುರುವಾರ ಕೊಡಗಿನಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಗುರುಹಿರಿಯ ಸಮ್ಮುಖದಲ್ಲಿ ಈ ಮದುವೆ ನಡೆದಿದ್ದು, ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳು, ಅನೇಕ ಗಣ್ಯರು ಕೊಡಗಿಗೆ ತೆರಳಿ ನವಜೋಡಿಗೆ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರದ ಬಜೆಟ್ ರಿವೀಲ್​!​ – ಎಲ್ಲೆಲ್ಲಿ ಶೂಟಿಂಗ್‌ ನಡೆಯಲಿದೆ ಗೊತ್ತಾ?

ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ ಮದುವೆಯಾಗಿರೋ ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಹರ್ಷಿಕಾ ದಂಪತಿಯ ಮದುವೆಗೆ ಮಾಜಿ ಸಿಎಂ ಬಿಎಸ್‌ ಯಡಿಯೂಪ್ಪ, ನಟ ತಬಲಾ ನಾಣಿ ಸೇರಿದಂತೆ ಅನೇಕ ಗಣ್ಯರು ತೆರಳಿ ನವ ದಂಪತಿಗೆ ಶುಭಾಶಯಕೋರಿದ್ದಾರೆ.

2012ರಿಂದಲೂ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರು ಪ್ರೀತಿಸುತ್ತಿದ್ದರು. ಆದರೆ ತಮ್ಮ ಪ್ರೀತಿಯ ಬಗ್ಗೆ ಅವರು ಸಾರ್ವಜನಿಕವಾಗಿ ಹೇಳಿಕೊಂಡಿರಲಿಲ್ಲ. ಇತ್ತೀಚೆಗೆ ಅವರ ಮದುವೆ ಆಮಂತ್ರಣ ಪತ್ರಿಕೆ ವೈರಲ್​ ಆದ ಬಳಿಕ ಎಲ್ಲರಿಗೂ ವಿಷಯ ತಿಳಿಯಿತು. ಇವರ ಪ್ರೀತಿಗೆ ಎರಡೂ ಕುಟುಂಬದವರು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದು. ಇದೀಗ ಅದ್ದೂರಿಯಾಗಿ ವಿವಾಹ ಕಾರ್ಯಕ್ರಮ ನೆರವೇರಿದೆ.

suddiyaana