ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ ದೇಗುಲ ಬಂದ್‌ – ದೇವಿ ದರ್ಶನಕ್ಕೆ ಇನ್ನೊಂದು ವರ್ಷ ಕಾಯಬೇಕು!

ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ ದೇಗುಲ ಬಂದ್‌ – ದೇವಿ ದರ್ಶನಕ್ಕೆ ಇನ್ನೊಂದು ವರ್ಷ ಕಾಯಬೇಕು!

ವರ್ಷಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇವಿ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ನವೆಂಬರ್‌ 2ರಂದು ಬಾಗಿಲು ತೆರೆದ ಹಾಸನಾಂಬಾ ದೇವಾಲಯ ಇಂದು (ನವೆಂಬರ್‌ 15) ಗರ್ಭಗುಡಿ ಬಾಗಿಲು ಮುಚ್ಚಲಿದೆ.

ಹಾಸನಾಂಬೆಯ ಕೊನೆಯ ದಿನದ ದರ್ಶನಕ್ಕೂ ಭಕ್ತ ಸಾಗರವೇ ಹರಿದು ಬಂದಿತ್ತು. ಬುಧವಾರ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಅಪಾರ ಭಕ್ತರು ಅಮ್ಮನ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಸಮಯದಲ್ಲಿ ಗಣ್ಯರು, ರಾಜಕಾರಣಿಗಳು, ಸಿನಿಮಾ ನಟ-ನಟಿಯರು ಸೇರಿದಂತೆ ಲಕ್ಷಾಂತರ ಜನರು ಅಮ್ಮನ ದರ್ಶನ ಪಡೆದುಕೊಂಡಿದ್ದು, ಇದೀಗ ಬುಧವಾರ ಹಾಸನಾಂಬೆಯ ದರ್ಶನಕ್ಕೆ ತೆರೆ ಬಿದ್ದಿದೆ. ಅಮ್ಮನ ದರ್ಶನಕ್ಕೆ ಒಂದು ವರ್ಷ ಕಾಯಲೇಬೇಕು. ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಮುಚ್ಚಲು ಕ್ಷಣಗಣನೆ ಆರಂಭವಾಗಿದ್ದು ಮಧ್ಯಾಹ್ನ 12 ನಂತರ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ 10 ಕೋಟಿ ಹಿಂದೂ ಕುಟುಂಬಕ್ಕೆ ಆಹ್ವಾನ!

ಕಳೆದ 12 ದಿನಗಳಿಂದ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದು 5.80 ಕೋಟಿ ಮೊತ್ತದ ಆದಾಯ ಹರಿದು ಬಂದಿದೆ. ಸಾರ್ವಜನಿಕ ದರ್ಶನದ ಕೊನೆಯ ಕೂಡ ಹಲವು ಶಾಸಕರು, ಮಾಜಿ ಸಚಿವರುಗಳು ಹಾಗೂ ಅಧಿಕಾರಿಗಳು ದೇವಿ ದರ್ಶನ ಪಡೆದು ಪುನೀತರಾಗಿದ್ದಾರೆ. ಬುಧವಾರ ಬೆಳಿಗ್ಗೆ 7.45ರ ವರೆಗೆ ತಾಯಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಸದ್ಯ ದರ್ಶನಕ್ಕೆ ತೆರೆ ಬಿದ್ದಿದೆ.

ಬುಧವಾರ ಮಧ್ಯಾಹ್ನ 12 ಗಂಟೆ ನಂತರ ಅರ್ಚಕರು ಶಾಸ್ತ್ರೋಕ್ತವಾಗಿ‌ ಗರ್ಭಗುಡಿ ಬಾಗಿಲು ಮುಚ್ಚಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸ್ಥಳೀಯ ಶಾಸಕ ಸ್ವರೂಪ್‌ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್ಪಿ‌ ಮಹಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತೆ. ಬಾಗಿಲು ಮುಚ್ಚುವ ಮುನ್ನ ದೀಪ‌ ಹಚ್ಚಿ, ದೇವಿಯ ಮುಂದೆ ಹೂವು, ನೈವೇದ್ಯ ಇಡಲಾಗುತ್ತೆ. ಆನಂತರ ಶಾಸ್ತ್ರೋಕ್ತವಾಗಿ ಬಾಗಿಲು ಬಂದ್ ಮಾಡಲಾಗುತ್ತೆ. ನ. 15 ರಂದು ಬಾಗಿಲು ಬಂದ್‌ ಮಾಡಿದ್ರೆ ಮುಂದಿನ ವರ್ಷ ದೇಗುಲದ ಬಾಗಿಲು ತೆರೆಯಲಾಗುತ್ತದೆ.

ಮುಂದಿನ ವರ್ಷ ಅಮ್ಮನ ದರ್ಶನೋತ್ಸವಕ್ಕೆ ದಿನಾಂಕವೂ ಫಿಕ್ಸ್!

ನ. 15 ರಂದು ಬಾಗಿಲು ಬಂದ್‌ ಮಾಡಿದ್ರೆ ಮುಂದಿನ ವರ್ಷ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಇದೀಗ ಮುಂದಿನ ವರ್ಷದ ಅಮ್ಮನ ದರ್ಶನೋತ್ಸವಕ್ಕೂ ದಿನಾಂಕವೂ ಫಿಕ್ಸ್ ಮಾಡಲಾಗಿದೆ.  2024ರ ಅಕ್ಟೋಬರ್ 24 ರಿಂದ ನವೆಂಬರ್ 3 ರ ವರೆಗೆ ಹಾಸನಾಂಬೆ ದರ್ಶನೋತ್ಸವದ ದಿನಾಂಕ ನಿಗದಿ ಮಾಡಲಾಗಿದೆ.

Shwetha M