ಹಾಸನಾಂಬೆ ಜಾತ್ರೆಗೆ ಮುಹೂರ್ತ ನಿಗದಿ – ನವೆಂಬರ್ 2ರಿಂದ 15ರವರೆಗೆ ದಿನದ 24 ಗಂಟೆಯೂ ದರ್ಶನ

ಹಾಸನಾಂಬೆ ಜಾತ್ರೆಗೆ ಮುಹೂರ್ತ ನಿಗದಿ – ನವೆಂಬರ್ 2ರಿಂದ 15ರವರೆಗೆ ದಿನದ 24 ಗಂಟೆಯೂ ದರ್ಶನ

ಹಾಸನ: ಶಕ್ತಿಮಾತೆಯ ಸ್ವರೂಪವಾಗಿಯುವ ಹಾಸನಾಂಬೆ ದೇವಿ ದೇವಿ ದೇವಾಲಯದ ಬಾಗಿಲು ತೆರೆಯಲು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಬಾರಿ ನವೆಂಬರ್ 2ರಿಂದ 15ರವರೆಗೆ ಭಕ್ತರಿಗೆ ಹಾಸನಾಂಬೆಯ ದರ್ಶನ ಸಿಗಲಿದೆ.

ವರ್ಷಕ್ಕೊಮ್ಮೆ ದರ್ಶನ ನೀಡುವ ಶ್ರೀ ಹಾಸನಾಂಬ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳೆಲ್ಲರಿಗೂ ದರ್ಶನ ಕಲ್ಪಿಸುವ ನಿಟ್ಟಿನಲ್ಲಿಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ನವೆಂಬರ್ 2ರಿಂದ 15ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದ್ದು, ದಿನದ 24 ಗಂಟೆಯೂ ಹಾಸನಾಂಬೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಲೋಕಸಭೆ ಸದಸ್ಯ ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ನೆಪ್ಚ್ಯೂನ್ ಗ್ರಹದ ಮೇಲೆ ನಿಗೂಢ ಕಪ್ಪು ಚುಕ್ಕೆ ಪತ್ತೆ! –  ಪ್ರಕಾಶಮಾನವಾದ ಚುಕ್ಕೆಯ ರಹಸ್ಯವೇನು?

‘ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರು ಸರದಿ ಸಾಲಿನಲ್ಲಿ ಸಾಗಲು ಯಾವುದೇ ತೊಂದರೆ ಆಗದಂತೆ ಶಾಮಿಯಾನ ಹಾಕಿಸುವುದರ ಜತೆಗೆ ನೀರು, ಮಜ್ಜಿಗೆ ವಿತರಣೆಗೆ ಕೌಂಟರ್‌ ತೆರೆಯಬೇಕು. ದೇವಿ ದರ್ಶನಕ್ಕೆ ಬರುವ ವಿವಿಐಪಿಗಳ ಶಿಷ್ಟಾಚಾರ ಪಾಲನೆ ಮಾಡಬೇಕು. ಜನಸಂದಣಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸ್ಕೌಟ್ಸ್‌ ಮತ್ತು ಗೈಡ್ಸ್‌, ಗೃಹ ರಕ್ಷಕದಳ ಜತೆಗೆ ಸ್ವಯಂ ಸೇವಕರನ್ನು ನಿಯೋಜನೆ ಮಾಡಲು ತಿಳಿಸಿದ್ದಾರೆ.

ಹಾಸನಾಂಬ ಜಾತ್ರಾ ಮಹೋತ್ಸದ ಹಿನ್ನೆಲೆಯಲ್ಲಿ ಸ್ವಾಗತ ಕಮಾನು, ಹೂವಿನ ಅಲಂಕಾರ, ದೀಪಾಲಂಕಾರಗಳಿಗೆ ನಿಯಮಾನುಸಾರ ವಾರ್ತಾ ಇಲಾಖೆ ಮೂಲಕ ಟೆಂಡರ್‌ ಕರೆಯುವಂತೆ ತಿಳಿಸಿದರು. ದೇವಸ್ಥಾನದ ಸಣ್ಣ ಪುಟ್ಟ ರಿಪೇರಿ ಸಂದರ್ಭದಲ್ಲಿ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ನಿಗಾವಹಿಸಿ ಎಂದು ತಿಳಿಸಿದರು.

suddiyaana