ಚಿಕ್ಕ ತಿರುಪತಿ ದೇವಸ್ಥಾನದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ- ಜಾತ್ರಾ ಮಹೋತ್ಸವದ ವೇಳೆ ಘಟನೆ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಖ್ಯಾತವಾಗಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವದ ವೇಳೆ ಈ ಘಟನೆ ನಡೆದಿದೆ.
ದೇವಾಲಯದ ಹೊರಗೆ ಖಾಸಗಿ ಸಂಸ್ಥೆಯೊಂದರಿಂದ ಮೊಸರು ಮತ್ತು ಬಿಸಿಬೇಳೆ ಬಾತ್ ರೂಪದಲ್ಲಿ ಪ್ರಸಾದ ವಿತರಿಸಲಾಗಿತ್ತು. ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 ಭಕ್ತರಿಗೆ ಈ ಪ್ರಸಾದ ವಿತರಣೆಯಾಗಿದೆ. ಇದನ್ನು ಸೇವಿಸಿದ ಕೆಲ ಭಕ್ತರು ಅಸ್ವಸ್ಥರಾಗಿದ್ದಾರೆ. ಪ್ರಸಾದ ಸೇವಿಸಿದ ಕೆಲ ಗಂಟೆಯ ನಂತ್ರ ಭಕ್ತರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಒಟ್ಟು 50ಕ್ಕೂ ಅಧಿಕ ಮಂದಿಯಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ.
ಕೂಡಲೇ ಅಸ್ವಸ್ಥರನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯ್ತು. ಸದ್ಯ, 30ಕ್ಕೂ ಹೆಚ್ಚು ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದ್ರ ಜೊತೆಗೆ ಭಕ್ತರು ಸೇವಿಸಿದ ಪ್ರಸಾದದ ಮಾದರಿಗಳನ್ನು ಸಂಗ್ರಹಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಪರೀಕ್ಷೆಗೆ ರವಾನಿಸಲಾಗಿದೆ.

ನೋಡಿರಿ

