ಮತ್ತೊಂದು ಎಟಿಎಂ ದರೋಡೆ – 3 ಕೋಟಿಯಷ್ಟು ಹಣ ಲಪಟಾಯಿಸಿದ ಕಂಪನಿ ಸಿಬ್ಬಂದಿ

ಮತ್ತೊಂದು ಎಟಿಎಂ ದರೋಡೆ – 3 ಕೋಟಿಯಷ್ಟು ಹಣ ಲಪಟಾಯಿಸಿದ ಕಂಪನಿ ಸಿಬ್ಬಂದಿ

ರಾಜ್ಯದಲ್ಲಿ ಎಟಿಎಂ ದರೋಡೆ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ದುಷ್ಟರ್ಮಿಗಳು ಕೋಟಿ ಕೋಟಿ ಹಣ ಲೂಟಿ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಎಟಿಎಂ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ ಎನ್ನಲಾಗ್ತಿದೆ.

ಇದನ್ನೂ ಓದಿ: ಟೀಂ ಇಂಡಿಯಾ ಪ್ಲೇಯರ್‌ ಬಾಳಲ್ಲಿ ಬಿರುಗಾಳಿ! – 26ನೇ ವಯಸ್ಸಲ್ಲೇ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಮತ್ತೊಬ್ಬ ಕ್ರಿಕೆಟಿಗ!

ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ ಮಾಸಿಕ ಆಡಿಟ್ ವೇಳೆ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಹಾಸನ ಬಡಾವಣೆ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಎಟಿಎಂಗಳಿಗೆ ಹಣ ತುಂಬುವ ಜವಾಬ್ದಾರಿಯಲ್ಲಿದ್ದ ಖಾಸಗಿ ಸಂಸ್ಥೆಯ ಸಿಬ್ಬಂದಿಗಳಾದ ನಂದೀಶ್ ಬಿ.ಎಲ್ ಹಾಗೂ ಮಧುಕುಮಾರ್ ಎಂ.ಪಿ ವಿರುದ್ಧ ಸುಮಾರು 3 ಕೋಟಿ 40 ಲಕ್ಷ 28 ಸಾವಿರ ರೂ. ಲಪಟಾಯಿಸಿದ ಆರೋಪ ಕೇಳಿಬಂದಿದೆ. 11 ಕೆನರಾ ಬ್ಯಾಂಕ್ ಎಟಿಎಂ,3 ಎಸ್ ಬಿ ಐ ಎಟಿಎಂ ಮತ್ತು 1 ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಸೇರಿ ಒಟ್ಟೂ 18 ಎಟಿಎಂಗಳಿಗೆ ಹಣ ಜಮಾ ಮಾಡಿದಂತೆ ಕೃತಕ ದಾಖಲೆ ಸೃಷ್ಟಿಸಿ, ವಾಸ್ತವವಾಗಿ ಹಣ ಜಮಾ ಮಾಡದೆ ದುರುಪಯೋಗ ಮಾಡಿಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಾಸನ ನಗರ ವ್ಯಾಪ್ತಿಯ ವಿವಿಧ ಎಟಿಎಂ ಗೆ ಹಣವನ್ನೇ ಹಾಕದೆ ಹಣ ಹಾಕಿರೊದಾಗಿ ರೆಸಿಪ್ಟ್ ತೆಗೆದು ವಂಚನೆ ಆರೋಪ ಹಿನ್ನೆಲೆ ಸಿಎಂಎಸ್ ಸಂಸ್ಥೆಯ ಹಾಸನ ಶಾಖೆ ವ್ಯವಸ್ಥಾಪಕ ರಾಜು ಹಾಸನ ಬಡಾವಣೆ ಠಾಣೆಯಲ್ಲಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ತನಿಖೆ ಆರಂಭಿಸಿದ್ದಾರೆ.

Shwetha M

Leave a Reply

Your email address will not be published. Required fields are marked *