ಹಾಸನ ಪೆನ್‌ಡ್ರೈವ್‌ ಕೇಸ್‌ – ಸಂಸದ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ  ಉಚ್ಛಾಟನೆ?

ಹಾಸನ ಪೆನ್‌ಡ್ರೈವ್‌ ಕೇಸ್‌ – ಸಂಸದ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ  ಉಚ್ಛಾಟನೆ?

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಈ ತನಿಖೆಯನ್ನು ವಿಶೇಷ ತನಿಖಾ ದಳ ಎಸ್‌ಐಟಿ ಗೆ ಹಸ್ತಾಂತರಿಸಲಾಗಿದೆ. ಇದೀಗ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಹೇಳಾಗುತ್ತಿದೆ.

ಇದನ್ನೂ ಓದಿ:ಹಾಸನ ಪೆನ್‌ ಡ್ರೈವ್‌ ಕೇಸ್‌ ಪ್ರಕರಣ – ಪ್ರಜ್ವಲ್​ ರೇವಣ್ಣ ಬಂಧನಕ್ಕೆ ಆಗ್ರಹಿಸಿ  ಹಲವೆಡೆ ಬೃಹತ್ ಪ್ರತಿಭಟನೆ

ಹಾನಸದಲ್ಲಿ ಕಳೆದ ಕೆಲವು ದಿನಗಳಿಂದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್‌ ಆಗುತ್ತಿತ್ತು. ಇದೀಗ ಈ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಹಾಗೂ ಎಫ್‌ಐಆರ್ ದಾಖಲಾದ ಮೇಲೆ ಜೆಡಿಎಸ್ ನಾಯಕರು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದಲೇ ವಜಾಗೊಳಿಸುವಂತೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ಪ್ರಜ್ವಲ್‌ ರೇವಣ್ಣ ಹಾಗೂ ಹೆಚ್‌.ಡಿ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಬಿಜಯ್ ಕುಮಾರ್‌ ಸಿಂಗ್‌ (ಬಿ.ಕೆ. ಸಿಂಗ್‌) ನೇತೃತ್ವದಲ್ಲಿ ವಿಶೇಷ ತನಿಖಾ ದಳವನ್ನು ರಚಿಸಿ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಮವಾರ ಎಸ್ಐಟಿ ತಂಡದಿಂದ ಸಭೆ ನಡೆಯಲಿದೆ. ಎಸ್ಐಟಿ ಮುಖ್ಯಸ್ಥ ಬಿ ಕೆ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಿಐಡಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ. ಎಸ್ಐಟಿ ತಂಡದಲ್ಲಿರುವ ಸುಮನ್ ಡಿ ಪನ್ನೇಕರ್ ಹಾಗೂ ಸೀಮಾ ಲಾಟ್ಕರ್ ಜೊತೆ ಸಭೆ ನಡೆಸಲಾಗುತ್ತಿದ್ದು, ತನಿಖೆ ವಿಧಾನ, ಎಸ್ಐಟಿಗೆ ಬೇಕಾದ ಇತರ ಅಧಿಕಾರಿ, ಸಿಬ್ಬಂದಿ ಆಯ್ಕೆ ಮಾಡಲಾಗುತ್ತೆ. ಜೊತೆಗೆ ಪ್ರಕರಣದಲ್ಲಿ ಕಲೆ ಹಾಕಬೇಕಾದ ಮಾಹಿತಿಗಳ ಬಗ್ಗೆ ಚರ್ಚೆಯೂ ಕೂಡಾ ನಡೆಯಲಿದೆ.

Shwetha M

Leave a Reply

Your email address will not be published. Required fields are marked *