ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷ! – ಎಸ್‌ಐಟಿಗೆ ಹಾಜರಾಗುತ್ತೇನೆ ಎಂದ ಹಾಸನ ಸಂಸದ

ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷ! – ಎಸ್‌ಐಟಿಗೆ ಹಾಜರಾಗುತ್ತೇನೆ ಎಂದ ಹಾಸನ ಸಂಸದ

ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ.  ಮೊದಲ ಬಾರಿಗೆ ವಿಡಿಯೋ ಮೂಲಕ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ಆರೋಪಕ್ಕೆ ಹೆದರಿ ದೇಶ ಬಿಟ್ಟಿಲ್ಲ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣ ಹೆಸರಿನಲ್ಲಿ ಅಕ್ರಮ ಹಣ ಸಂಗ್ರಹ! –  ನಟ ದರ್ಶನಗೂ ಮೋಸ?

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹಾರಿದ್ದರು. ಒಂದು ತಿಂಗಳಿನಿಂದ ಪ್ರಜ್ವಲ್‌ ರೇವಣ್ಣ ಎಲ್ಲಿದ್ದಾರೆ ಎಂಬ ಸುಳಿವು ಸಿಕ್ಕಿರಲಿಲ್ಲ. ಇದೀಗ ಪ್ರಜ್ವಲ್‌ ರೇವಣ್ಣ ವಿಡಿಯೋವೊಂದನ್ನು ರಿಲೀಸ್‌ ಮಾಡಿದ್ದಾರೆ. ಮೇ 31 ಅಂದರೆ ಶುಕ್ರವಾರ ಎಸ್​ ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದಾರೆ. ಪ್ರಕರಣದ ಬಗ್ಗೆ ಕಾನೂನು ಹೋರಾಟಕ್ಕೆ ಸಿದ್ಧ.. ಶುಕ್ರವಾರ ಭಾರತಕ್ಕೆ ಬಂದ ಕೂಡಲೇ ವಿಶೇಷ ತನಿಖಾ ತಂಡದ ಅಧಿಕಾರಿಗಳ ಎದುರು ಹಾಜರಾಗುವೆ ಎಂದು ಪ್ರಜ್ವಲ್​ ವಿಡಿಯೋ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ವಿಡಿಯೋದಲ್ಲಿ ನನ್ನ ತಂದೆ, ತಾಯಿ, ದೇವೇಗೌಡರು, ಕುಮಾರಣ್ಣರ ಕ್ಷಮೆ ಕೇಳ್ತೇನೆ ಎಂದಿರುವ ಪ್ರಜ್ವಲ್ ರೇವಣ್ಣ ಅವರು ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ಮಾಡಿದ್ದಾರೆ. ಕೆಲ ಶಕ್ತಿಗಳು ಒಟ್ಟಾಗಿ ಸೇರಿಕೊಂಡು ನನ್ನ ವಿರುದ್ದ ಪಿತೂರಿ ಮಾಡಿದ್ರು. ಕಾಂಗ್ರೆಸ್ ನಾಯಕರು, ರಾಹುಲ್‌ ಗಾಂಧಿ ನನ್ನ ವಿರುದ್ದ ಬಹಿರಂಗವಾಗಿ ಮಾತಾಡಿದ್ದರು. ಈ ಮಾಹಿತಿಯನ್ನು ನೋಡಿ ನಾನು ಡಿಪ್ರೆಶನ್‌ಗೆ ಹೋಗಿ ಐಸೋಲೇಷನ್‌ಗೆ ಒಳಗಾಗಿದ್ದೆ ಎಂದಿದ್ದಾರೆ.

Shwetha M