ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು – ಕುಟುಂಬ ಭೇಟಿ ಮಾಡಲು ಹೊರಟ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ದುರಂತ ಅಂತ್ಯ!

ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು – ಕುಟುಂಬ ಭೇಟಿ ಮಾಡಲು ಹೊರಟ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ದುರಂತ ಅಂತ್ಯ!

ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ನಡೆದಿದೆ. ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಸಜೀವ ದಹನವಾಗಿದ್ದಾರೆ.

ಇದನ್ನೂ ಓದಿ: ನಾನೂ ಶಾಲೆಗೆ ಬರ್ತೀನಿ.. – ಪುಟ್ಟ ಹುಡುಗಿ ಜೊತೆ ಸ್ಕೂಲ್‌ಗೆ ಹೊರಟ ಮರಿಯಾನೆ!

ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ದುರ್ಗಘಟನೆಯಲ್ಲಿ ಮೃತಪಟ್ಟಿದ್ದಾರೆ.

ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.

ಸಾಲಿಮಠ ಅವರು ನಿನ್ನೆ ರಾತ್ರಿ (ಶುಕ್ರವಾರ) ಐ20 ಕಾರಿನಲ್ಲಿ ಕುಟುಂಬವನ್ನ ಬೇಟಿ ಮಾಡಲು ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಐ20 ಕಾರು ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅಲ್ಲದೇ ಕೆಲವೇ ಕ್ಷಣಗಳಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ಇನ್ಸ್​ಪೆಕ್ಟರ್ PS ಸಾಲಿಮಠ ಅವರಿಗೆ ​​ ಲಾಕ್ ತೆಗೆದು ಹೊರಬರಲಾಗಲಿಲ್ಲ. ಇದ್ರಿಂದಾಗಿ ಇನ್ಸ್‌ಪೆಕ್ಟರ್‌ ಕಾರಿನೊಳಗೆ ಸಜೀವ ದಹನವಾಗಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್​ಪೆಕ್ಟರ್​ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.

ಮೃತದೇಹ ಸುಟ್ಟು ಕರಕಲಾಗಿದ್ದರಿಂದ ಪತ್ತೆ ಹಚ್ಚುವುದು ಕಷ್ಟವಾಗಿತ್ತು. ಈ ವೇಳೆ ಅವರ ಕುಟುಂಬ ಪಂಚಾಕ್ಷರಿ ಸಾಲಿಮಠ ಅವರ ಗುರುತು ಪತ್ತೆ ಮಾಡಿದೆ. ಕೈಯಲ್ಲಿದ್ದ ಬ್ರೆಸ್ಲೆಟ್ ನೋಡಿ ಪತ್ತೆ ಮಾಡಲಾಗಿದೆ. ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಾಗ ಏಕಾಎಕಿ ಬೆಂಕಿ‌ ಹತ್ತಿದೆ. ಪೆಟ್ರೋಲ್ ಲಿಕ್ ಆದ ಕಾರಣ ಸ್ಪಾರ್ಕ್ ಆಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕವಾಗಿ ತಿಳಿಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್.ಪಿ ಗುಂಜನ್ ಆರ್ಯ ಕೂಡಾ ಭೇಟಿ ನೀಡಿದ್ದಾರೆ.

Shwetha M