ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಕಾ – ಯಾವ್ಯಾವ ಕ್ಷೇತ್ರಗಳನ್ನ ಕೇಳಿದ್ದಾರೆ ಹೆಚ್.ಡಿ ದೇವೇಗೌಡ?
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ರಾಜ್ಯ ರಾಜಕೀಯದಲ್ಲೂ ಭಾರೀ ಬೆಳವಣಿಗೆಗಳಾತ್ತಿವೆ. ಅದರಲ್ಲೂ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಳ್ಳೋದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಅಲ್ಲದೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಖುದ್ದು ಅಖಾಡಕ್ಕೆ ಧುಮುಕಿದ್ದು, ಮತ್ತಷ್ಟು ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಬ್ಯಾಂಕಾಕ್‌ನಿಂದ ಬಂದವನ ಲಗೇಜ್‌ನಲ್ಲಿತ್ತು 20 ಜೀವಂತ ಕಾಳಿಂಗ ಸರ್ಪ, ಅಪರೂಪದ ವನ್ಯಜೀವಿಗಳು!
ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಕಾಂಗ್ರೆಸ್ ಲೋಕಸಭೆಯಲ್ಲೂ (Loksabha Elections 2024) ವಿಜಯಪತಾಕೆ ಹಾರಿಸಬೇಕೆಂಬುದು ಪ್ಲ್ಯಾನ್ ಮಾಡುತ್ತಿದೆ. ಹೀಗಾಗಿಯೇ, ಬಿಜೆಪಿ ಹಾಲಿ ಶಾಸಕರು, ಸೋತಿರುವ ಪ್ರಭಾವಿ ಮಾಜಿ ಶಾಸಕರು, ಬಿಜೆಪಿ, ಜೆಡಿಎಸ್‌ನ ಪ್ರಭಾವಿ ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ. ಮತ್ತೊಂದೆಡೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಒಟ್ಟಿಗೆ ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಮುಮದಾಗಿವೆ. ಹೌದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ನಾಯಕರ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಮೈತ್ರಿ ಪಕ್ಕಾ ಎನ್ನಲಾಗುತ್ತಿದೆ. ಆದ್ರೆ, ಪ್ರಧಾನಿ ನರೇಂದ್ರ ಮೋದಿ ಅವರು ಅನುಮತಿ ನೀಡುವುದೊಂದೇ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.
ದೇವೇಗೌಡ ಅವರು ಬಿಜೆಪಿ ನಾಯಕರೊಂದಿಗೆ ನಡೆಸಿದ್ದ ಮಾತುಕತೆ ಯಶಸ್ವಿಯಾಗಿದ್ದಲ್ಲದೇ ಕ್ಷೇತ್ರ ಹಂಚಿಕೆ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ದೇವೇಗೌಡ ಅವರು ಐದು ಲೋಕಸಭಾ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ದೇವೇಗೌಡ್ರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಹುತೇಕ ಹಳೇ ಮೈಸೂರು ಭಾಗದ ಕ್ಷೇತ್ರಗಳನ್ನೇ ದೇವೇಗೌಡ್ರು ಹೇಳಿದ್ದಾರೆ ಎನ್ನಲಾಗಿದೆ. ಹಾಸನ, ಮಂಡ್ಯ, ತುಮಕೂರು, ಕೋಲಾರ ಹಾಗೂ ಮತ್ತೊಂದು ಕ್ಷೇತ್ರ ಕೇಳಿದ್ದಾರೆ ಎನ್ನಲಾಗಿದೆ.