ಇಂಧನ ಇಲಾಖೆಯಲ್ಲಿ 10 ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ! –  ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಇಂಧನ ಇಲಾಖೆಯಲ್ಲಿ 10 ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ! –  ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ. ಈ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದೇ ವಿಚಾರಕ್ಕೆ ದಳಪತಿ ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಈ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ ಅವರು ಮತ್ತೆ ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಇಂಧನ ಇಲಾಖೆಯಲ್ಲೂ ವರ್ಗಾವಣೆ ದಂಧೆ ನಡೆಯುತ್ತಿದೆ. ಮಂಗಳವಾರ (ಜುಲೈ 04) ಇಂಧನ ಇಲಾಖೆಯಲ್ಲಿ ಎರಡು ಟ್ರಾನ್ಸ್ ಫರ್ ಆಗಿದೆ. ಇಂಧನ ಇಲಾಖೆಯಲ್ಲಿ 10 ಕೋಟಿ ರೂಪಾಯಿಗೆ ಅಧಿಕಾರಿಗಳ ವರ್ಗಾವಣೆಯಾಗಿದ್ದು, ಆ ಅಧಿಕಾರಿ ದಿನಕ್ಕೆ 50 ಲಕ್ಷ ರೂ. ಕಮಿಷನ್ ಹೊಡೆಯುತ್ತಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ – ನನ್ನ ಬಳಿ ದಾಖಲೆ ಇದೆ ಎಂದು ಪೆನ್ ಡ್ರೈವ್ ಪ್ರದರ್ಶಿಸಿದ ಹೆಚ್‌ಡಿಕೆ

ಮೈಸೂರು , ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿಯಲ್ಲಿದ್ದ ಮುಖ್ಯ ಇಂಜಿನಿಯರ್ (ವಿದ್ಯುತ್) ಶ್ರೀಮತಿ ಡಿ.ಪದ್ಮಾವತಿ ಅವರನ್ನು ಮಂಗಳೂರು ವಿದ್ಯುತ್‌ ಸರಬರಾಜು ನಿಗಮ ನಿಯಮಿತ ವ್ಯವಸ್ತಾಪಕ ನಿರ್ದೇಶಕರು ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಎರಡನೆಯದಾಗಿ  ತಿತೀರಾ ಎನ್.ಅಪ್ಪಚ್ಚು ಮುಖ್ಯ ವಿದ್ಯುತ್ ಪರಿವೀಕ್ಷಕರು, ದಕ್ಷಿಣ ವಲಯ, ಬೆಂಗಳೂರು ಅವರನ್ನು ವೇತನ ಹೆಚ್ಚಿಸಿ ಸ್ಥಾನ ಭಡ್ತಿ ಮಾಡಿ, ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯಲ್ಲಿ  ಮುಖ್ಯ ವಿದ್ಯುತ್‌ ಪರಿವೀಕ್ಷಕರ ಹುದ್ದೆಗೆ ನೇಮಿಸಲಾಗಿತ್ತು. ಕುಮಾರಸ್ವಾಮಿ ಇಂಧನ ಇಲಾಖೆಯಲ್ಲಿ ಮಾಡಿರುವ ವರ್ಗಾವಣೆ ಆರೋಪ ಇವೆರಡು ಎಂದು ಹೇಳಲಾಗುತ್ತಿದೆ.

ಇನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ವಿರುದ್ಧ ಕೂಡ ಗುಡುಗಿರುವ ಹೆಚ್‌ಡಿಕೆ ಟನಲ್ ಮಾಡೋಕೆ ಹೋಗಿ ಬೆಂಗಳೂರನ್ನು ಸಮಾಧಿ ಮಾಡಿದ್ರಿ. ಈಗಾಗಲೇ ಅಭಿವೃದ್ಧಿ ವಿಚಾರದಲ್ಲಿ ಸಮಾಧಿಯಾಗಿದೆ. ಬೆಂಗಳೂರು ಸಮಸ್ಯೆಗೆ ವೈಜ್ಞಾನಿಕ ರೀತಿಯಲ್ಲಿ ಕೆಲ್ಸ ಮಾಡಿ. ಟನಲ್ ಮಾಡಿಸೋಕೆ ಹೋಗಿ ಬೆಂಗಳೂರು ಹಾಳ್ ಮಾಡಬೇಡಿ. 1999ರಿಂದ ಬೆಂಗಳೂರಿಗೆ ಏನು ಅಭಿವೃದ್ದಿ‌ ಮಾಡಿದ್ದೀರಿ ಎಂದು ಬೇಕಾದಷ್ಟು ದಾಖಲೆ ಇದೆ ಎಂದು ಗುಡುಗಿದ್ದಾರೆ.

suddiyaana