ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಪ್ರಚಾರ ಮಾಡುತ್ತಾರಾ? – ಹೆಚ್‌ಡಿಕೆ ಹೇಳಿದ್ದೇನು?

ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಪ್ರಚಾರ ಮಾಡುತ್ತಾರಾ? – ಹೆಚ್‌ಡಿಕೆ ಹೇಳಿದ್ದೇನು?

ಈ ಬಾರಿ ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣೆ ಅಖಾಡ ಸಂಪೂರ್ಣ ಬದಲಾಗಿದೆ. 5 ವರ್ಷಗಳ ಹಿಂದಿನ ಚಿತ್ರಣಕ್ಕೂ ಈಗಿನ ಚಿತ್ರಣಕ್ಕೂ ಭಾರೀ ವ್ಯತ್ಯಾಸವಿದೆ. ಅಂದು ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಈಗ ಬಿಜೆಪಿ ಸುಮಲತಾ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪಕ್ಷ ಹೇಳಿದರೆ ಕುಮಾರಸ್ವಾಮಿ ಪರ ಸುಮಲತಾ ಪ್ರಚಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ, ಸುಮಲತಾ ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ ನಡೆಸದಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ಬಗ್ಗೆ ಹೆಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ. ಸುಮಲತಾ ಈಗ ಬಿಜೆಪಿ ಸೇರಿದ್ದಾರೆ. ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಮೂರು ದಿನ ಇದೆ, ನೋಡೋಣ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್‌ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿ ಕುಮಾರಸ್ವಾಮಿ, ಸುಮಲತಾ ಅವರು ಈಗ ಬಿಜೆಪಿ ಸೇರಿದ್ದಾರೆ. ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಮೂರು ದಿನ ಇದೆ, ನೋಡೋಣ.. ಸುಮಲತಾ ನಮ್ಮಲ್ಲಿ ಕೂಡ ಬಂದು ಪ್ರಚಾರ ಮಾಡಬಹುದು. ಕೇವಲ ಹೇಳಿಕೆಗಳನ್ನು ನೀಡುವುದರಿಂದ ಏನೂ ಆಗುವುದಿಲ್ಲ. ಹೇಳಿಕೆ ಕೊಡದೆಯೂ ಬೆಂಬಲ ನೀಡಬಹುದಲ್ವಾ ಅಂತಾ ಹೇಳಿದ್ದಾರೆ.

ಇನ್ನು ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ನಟ ಚಾಲೇಂಜಿಂಗ್‌ ಸ್ಟಾರ್‌ ದರ್ಶನ್‌ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಇದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಸುಮಲತಾ, ಅವರಿಗೆ ಇಷ್ಟವಾದವರ ಪರ ಪ್ರಚಾರ ನಡೆಸುತ್ತಾರೆ. ಅದನ್ನು ನಾನು ಕೇಳಲು ಸಾಧ್ಯವಿಲ್ಲ. ನಾನು ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Shwetha M