ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಮೂಲಕ ಜನತೆಗೆ ಟೋಪಿ! – ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಮೂಲಕ ಜನತೆಗೆ ಟೋಪಿ! – ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಇದನ್ನೂ ಓದಿ: ತಪ್ಪಾಗಿ ಆಡಿರೋ ಮಾತಿಗೆ ಲಗಾಮು ಹಾಕೋಕೆ ಕಿಚ್ಚ ಬಂದಾಯ್ತು!‌ – ಅಶ್ವಿನಿ, ಸುಧಿಗೆ ಮಾರಿಹಬ್ಬ.. ರಕ್ಷಿತಾಗೆ ಕಿಚ್ಚನ ಚಪ್ಪಾಳೆ?

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಹೆಚ್‌ಡಿಕೆ, ಐದು ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಪಕ್ಷ ಈಗಾಗಲೇ ರಾಜ್ಯ ಸರ್ಕಾರದ ಖಜಾನೆ ಖಾಲಿ ಮಾಡಿದೆ. ಈಗ A-ಖಾತಾ B-ಖಾತಾದಲ್ಲಿ ಜನರನ್ನು ಲೂಟಿ ಮಾಡಲು ಮುಂದಾಗಿದ್ದಾರೆ. ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ ಟೋಪಿ ಹಾಕುವ ಯೋಜನೆ. ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಆರೋಪಿಸಿದ್ದಾರೆ.

ಬೆಸ್ಕಾಂನಲ್ಲಿ 3–4 ಲಕ್ಷ ಅರ್ಜಿಗಳು ಬಂದಿವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸರ್ಕಾರ ಶೇಕಡಾ 5ರಷ್ಟು ಹೆಚ್ಚುವರಿ ಶುಲ್ಕ ಹೇರುತ್ತಿದೆ. ಇದು ಜನರಿಗೆ ಹೊರೆಯಾಗಲಿದೆ, ನಾನು ಓಪನ್ ಆಗಿಯೇ ಹೇಳುತ್ತಿದ್ದೀನಿ, ಇನ್ನೆರಡು ವರ್ಷ ಸುಮ್ನಿರಿ, ಎ ಖಾತಾ, ಬಿ ಖಾತಾದ ಮೋಸದ ಬಲೆಗೆ ಬೀಳಬೇಡಿ ಎಂದರು.

ಬಿ ಖಾತಾ ಸಮಸ್ಯೆ 1995ರಿಂದಲೂ ಇದೆ. 1997ರಲ್ಲಿ ಈ ಬಗ್ಗೆ ಆದೇಶ ಹೊರಬಂದಿತ್ತು. ನಮ್ಮ ಆಡಳಿತದಲ್ಲಿ ನಗರಾಭಿವೃದ್ಧಿಗೆ ಹಲವಾರು ಕ್ರಮ ಕೈಗೊಂಡಿದ್ದೇವೆ. 7 ನಗರಸಭೆಗಳನ್ನು 9ಕ್ಕೆ ಏರಿಸಿದ್ದೇವೆ, 68 ವಾರ್ಡ್‌ಗಳನ್ನು 98ಕ್ಕೆ ವಿಸ್ತರಿಸಿದ್ದೇವೆ, 110 ಹಳ್ಳಿಗಳನ್ನು ಬಿಬಿಎಂಪಿಗೆ ಸೇರಿಸಿದ್ದೇವೆ. ಐದು ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಅನುದಾನ ತಂದಿದ್ದೆವು ಎಂದರು.

Shwetha M