ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ – ಹೆಚ್‌ ಡಿಕೆ  

ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ – ಹೆಚ್‌ ಡಿಕೆ  

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈವರೆಗಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಹೆಚ್‌ ಡಿಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮುಳುಗಿದ ‘ರವಿ’ – ತನ್ನ ಆಪ್ತನಿಂದಲೇ ಸೋಲು ಕಂಡ ಸಿ.ಟಿ ರವಿ

ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಶ್ರೀ ಹೆಚ್.ಡಿ.ದೇವೇಗೌಡರು, ಶ್ರೀ ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಗಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

suddiyaana