ಕುಟುಂಬ ಸಮೇತ ಹೆಚ್.ಡಿ ಕುಮಾರಸ್ವಾಮಿ ಮತದಾನ –  ಎಡಗೈ ಬದಲು ಬಲಗೈಗೆ ಶಾಹಿ ಹಾಕಿಸಿಕೊಂಡ ಸಿದ್ದರಾಮಯ್ಯ 

ಕುಟುಂಬ ಸಮೇತ ಹೆಚ್.ಡಿ ಕುಮಾರಸ್ವಾಮಿ ಮತದಾನ –  ಎಡಗೈ ಬದಲು ಬಲಗೈಗೆ ಶಾಹಿ ಹಾಕಿಸಿಕೊಂಡ ಸಿದ್ದರಾಮಯ್ಯ 

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಘಟಾನುಘಟಿ ರಾಜಕಾರಣಿಗಳು ತಮ್ಮ ಹಕ್ಕು ಚಲಾಯಿಸಿದರು. ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಆಗಮಿಸಿದ ಕುಮಾರಸ್ವಾಮಿ ಮತದಾನ ಮಾಡಿದರು. ಕೇತಗಾನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಮತಗಟ್ಟೆ ಸಂಖ್ಯೆ 235ರಲ್ಲಿ ಮತ ಚಲಾಯಿಸಿದರು. ಮಾಜಿ ಸಿಎಂ ಕುಮಾರಸ್ವಾಮಿಗೆ ಮಾಗಡಿ ಶಾಸಕ ಎ.ಮಂಜುನಾಥ್ ಸಾಥ್ ನೀಡಿದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದಕ್ಕೂ ಮುನ್ನ ಅವರು ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದರು. ಸಿದ್ದರಾಮಹುಂಡಿಯಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ಪುತ್ರ ಯತೀಂದ್ರ, ಸೊಸೆ ಸ್ಮಿತಾ ಜತೆಗೆ ತೆರಳಿ ಮತದಾನ ಮಾಡಿದ್ದಾರೆ. ಬಳಿಕ ಸಿದ್ದರಾಮನ ಹುಂಡಿಯಲ್ಲಿರುವ ಮನೆಯಲ್ಲಿ ಕೆಲಕಾಲ ವಿಶ್ರಾಂತಿ ಪಡೆದು, ಸಿದ್ದರಾಮೇಶ್ವರ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 130 ಸೀಟುಗಳನ್ನು ಪಡೆಯುತ್ತದೆ, ಅದು 150 ಸ್ಥಾನಗಳಿಗೆ ಏರಬಹುದು ಎಂದರು. ಮತದಾನದ ನಂತರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಚ್ಚಲಾಗುತ್ತದೆ. ಆದರೆ, ಸಿದ್ದರಾಮಯ್ಯ ಅವರ ಬಲಗೈನ ತೋರು ಬೆರಳಿಗೆ ಶಾಯಿ ಹಚ್ಚಲಾಗಿದೆ.

suddiyaana