ಷರತ್ತುಗಳಿಗೆ ಒಪ್ಪಿದ್ರೆ ಮೈತ್ರಿಗೆ ಸಿದ್ಧ – ಸಮ್ಮಿಶ್ರ ಸರ್ಕಾರದ ನಿರೀಕ್ಷೆಯಲ್ಲಿ ಹೆಚ್ ಡಿಕೆ

ಷರತ್ತುಗಳಿಗೆ ಒಪ್ಪಿದ್ರೆ ಮೈತ್ರಿಗೆ ಸಿದ್ಧ – ಸಮ್ಮಿಶ್ರ ಸರ್ಕಾರದ ನಿರೀಕ್ಷೆಯಲ್ಲಿ ಹೆಚ್ ಡಿಕೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದಿದೆ. ರಾಜ್ಯದ ಸಿಎಂ ಪಟ್ಟ ಯಾರಿಗೆ ಲಭಿಸಲಿದೆ ಅಂತಾ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದೆ. ಇದೀಗ ಚುನಾವಣೋತ್ತರ ಫಲಿತಾಂಶ ಕೂಡ ಹೊರಬಿದ್ದಿದ್ದು ಈಗಾಗಲೇ ಎಲ್ಲಾ ಪಕ್ಷಗಳಲ್ಲಿ ಲೆಕ್ಕಾಚಾರ ಶುರುವಾಗಿದೆ. ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಅವರು ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಎಡಗೈನಲ್ಲಿ ಊತ.. ವೈದ್ಯರಿಂದ ಚಿಕಿತ್ಸೆ – 15 ದಿನ ವಿಶ್ರಾಂತಿ ಪಡೆಯುವಂತೆ ಸಲಹೆ!

ಸುದ್ದಿಗಾರರೊಂದಿಗೆ ಮಾತನಾಡಿರುವ ಹೆಚ್ ಡಿಕೆ, ಹಲವು ಸಮೀಕ್ಷೆಗಳು ಜೆಡಿಎಸ್ ಪಕ್ಷ ಬಹಳ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಹೇಳಿವೆ. ಆದರೆ ನಮ್ಮ ಪಕ್ಷ 50 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ ಅನ್ನುವ ವಿಶ್ವಾಸ ನಮ್ಮಲ್ಲಿದೆ.  ಈ ಬಾರಿ ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ಸರ್ಕಾರವನ್ನು ನಡೆಸಲು ಸ್ವತಂತ್ರ ನೀಡುವುದು, ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು, ಯಾರು ಹಿಡಿತಸಾಧಿಸಬಾರದು. ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು, ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು. ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂಬ ಷರತ್ತುಗಳನ್ನು ಕುಮಾರಸ್ವಾಮಿಯವರು ಮುಂದಿಟ್ಟಿದ್ದಾರೆಂದು ತಿಳಿದುಬಂದಿದೆ.

suddiyaana