ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತೆ ವಿದೇಶಿ ಪ್ರವಾಸ – ಕಾಂಬೋಡಿಯಾಕ್ಕೆ ಸ್ನೇಹಿತರ ಜೊತೆ ತೆರಳಿದ ಹೆಚ್‌ಡಿಕೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತೆ ವಿದೇಶಿ ಪ್ರವಾಸ – ಕಾಂಬೋಡಿಯಾಕ್ಕೆ ಸ್ನೇಹಿತರ ಜೊತೆ ತೆರಳಿದ ಹೆಚ್‌ಡಿಕೆ

ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮೊನ್ನೆಯಷ್ಟೇ ಕುಟುಂಬ ಸಮೇತ ಯುರೋಪ್ ಪ್ರವಾಸ ಮಾಡಿ ಬಂದಿದ್ದರು. ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಕುಮಾರಸ್ವಾಮಿ ಸೊಸೆ ಮೊಮ್ಮೊಗನ ಜೊತೆ ವಿದೇಶಿ ಪ್ರವಾಸ ಮಾಡಿದ್ದರು. ಇದೀಗ ಮತ್ತೆ ಹೆಚ್.ಡಿ ಕುಮಾರಸ್ವಾಮಿ ಫಾರಿನ್ ಟೂರ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ಕ್ಯಾಶ್​ ಆ್ಯಂಡ್​ ಕ್ಯಾರಿ! –  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಸೋಮವಾರ ಮಧ್ಯರಾತ್ರಿ ಕಾಂಬೋಡಿಯಾಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಪ್ರಯಾಣ ಬೆಳೆಸಿದ್ದಾರೆ. ಕುಮಾರಸ್ವಾಮಿಯವ ಕಾಂಬೋಡಿಯಾ ಪ್ರವಾಸಕ್ಕೆ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಸಾ.ರಾ.ಮಹೇಶ್, ಎಂ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಮಾಜಿ ಸದಸ್ಯ ರಮೇಶ್ ಗೌಡ ಅವರೂ ತೆರಳಿದ್ದಾರೆ. ಸೋಮವಾರ ಮಧ್ಯರಾತ್ರಿ 12 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಿಂದ ಕಾಂಬೋಡಿಯಾಕ್ಕೆ ತೆರಳಿದ್ದಾರೆ. ಆಗಸ್ಟ್ 12ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ತಮ್ಮ ಕುಟುಂಬದ ಸದಸ್ಯರೊಂದಿಗೆ ಹತ್ತು ದಿನಗಳ ಯುರೋಪ್ ಪ್ರವಾಸ ಮುಗಿಸಿ ಬಂದಿದ್ದ ಕುಮಾರಸ್ವಾಮಿ, ಇದೀಗ ಮತ್ತೆ ವಿದೇಶಕ್ಕೆ ಪ್ರಯಾಣ ಬೆಳೆಸುತ್ತಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ.  ಆದರೆ ಈ ಬಾರಿ ಕಾಂಬೋಡಿಯಾ ದೇಶದ ವಾಣಿಜ್ಯ ಸಂಸ್ಥೆಯೊಂದರ ಅಧಿಕೃತ ಆಹ್ವಾನದ ಮೇರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದ ವೇಳೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರ ಉರುಳಿಸುವ ಷಡ್ಯಂತ್ರ ನಡೆಸಲು ಸಿಂಗಾಪುರಕ್ಕೆ ತೆರಳಿದ್ದಾರೆ ಎಂಬ ಆರೋಪ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

suddiyaana