ರಾಜ್ಯದಲ್ಲಿ ಕಾಟನ್ ಕ್ಯಾಂಡಿ, ಕೃತಕ ಬಣ್ಣ ಬಳಸಿದ ಗೋಬಿ ಮಂಚೂರಿ ನಿಷೇಧ

ರಾಜ್ಯದಲ್ಲಿ ಕಾಟನ್ ಕ್ಯಾಂಡಿ, ಕೃತಕ ಬಣ್ಣ ಬಳಸಿದ ಗೋಬಿ ಮಂಚೂರಿ ನಿಷೇಧ

ಕಾಟನ್ ಕ್ಯಾಂಡಿ ಮಕ್ಕಳ ಅಚ್ಚುಮೆಚ್ಚಿನ ತಿನಿಸು. ಜಾತ್ರೆ ಸೇರಿದಂತೆ ಹಲವು ಕಡೆ ಇದನ್ನು ಮಾರಾಟ ಮಾಡಲಾಗುತ್ತದೆ. ಉದ್ದನೆಯ ಕೋಲಿಗೆ ಬಾಂಬೆ ಮಿಠಾಯಿಯನ್ನು ಸಿಕ್ಕಿಸಿಕೊಂಡು ಬೀದಿ ಬೀದಿಗಳಲ್ಲಿ ಮಾರಾಟ ಮಾಡುವುದನ್ನ ನಾವು ನೋಡುತ್ತಿರುತ್ತೇವೆ. ಇದೀಗ ಕಾಟನ್ ಕ್ಯಾಂಡಿಯನ್ನು ಕರ್ನಾಟಕದಲ್ಲಿ ಬ್ಯಾನ್‌ ಮಾಡಲಾಗಿದೆ, ಅಷ್ಟೇ ಅಲ್ಲದೇ ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನ ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣದ ಬಾಂಬರ್ ಯಾರೆಂಬುದು ಗೊತ್ತಾಗಿದೆ -ಗೃಹಸಚಿವ ಪರಮೇಶ್ವರ್

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ, ರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯನ್ನು ಬ್ಯಾನ್‌ ಮಾಡಲಾಗಿದೆ. ಹಾಗೆಯೇ ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನ ಬಳಸುವಂತಿಲ್ಲ. ಒಂದು ವೇಳೆ ಕಾಟನ್ ಕ್ಯಾಂಡಿ ಮಾರಾಟ ಮಾಡಿದ್ರೆ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಬಣ್ಣವನ್ನ ಬಳಸಿದ್ರೆ 2006ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 59ರ ಅಡಿಯಲ್ಲಿ ಕಾನೂನು ಕ್ರಮಕೈಗೊಳ್ಳಲಾಗುತ್ತೆ. 10 ಲಕ್ಷ ದಂಡ ಮತ್ತು 7 ವರ್ಷ ಜೈಲು ಶಿಕ್ಷೆ ನೀಡಲಾಗುತ್ತೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹ ಮಾಡಿದ್ದೇವೆ. ಗೋಬಿ ಮಂಚೂರಿಯ 171 ಮಾದರಿಗಳ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 107 ಮಾದರಿಯಲ್ಲಿ ಕೃತಕ ಬಣ್ಣಗಳು ಕಂಡು ಬಂದಿವೆ. ಇದರಲ್ಲಿ ಟಾರ್ ಟ್ರಾಸೈಲ್, ಸನ್ ಸೆಟ್ ಯೆಲ್ಲೋ ಹಾಗೂ ಕಾರ್ಮೋಸಿನ್ ಪತ್ತೆಯಾಗಿದೆ. ಇನ್ನು ಕಾಟನ್ ಕ್ಯಾಂಡಿಯ 25 ಮಾದರಿಯ ಸಂಗ್ರಹ ಮಾಡಲಾಗಿತ್ತು, 15 ಮಾದರಿಯಲ್ಲಿ ಕೃತಕ ಬಣ್ಣಗಳು ಕಂಡು ಬಂದಿವೆ. ರೋಡ್ ಮೈನ್-ಬಿ ಅಂಶ ಪತ್ತೆ ಆಗಿರುವುದು ಬೆಳಕಿಗೆ ಬಂದಿದೆ. ಕಂಡು ಬಂದಿರುವ ಕೃತಕ ಬಣ್ಣಗಳ ಮಾದರಿ ಪುಡ್ ಸೇಫ್ಟಿ ಆ್ಯಕ್ಟ್ ಪ್ರಕಾರ ಅಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ.

Shwetha M