ರಾಜ್ಯದಲ್ಲಿ ಹೆಚ್ಚಾಯ್ತು ಬಿಸಿಗಾಳಿ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಹೆಚ್ಚಾಯ್ತು ಬಿಸಿಗಾಳಿ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲದಿನಗಳಿಂದ ಬಿಸಿಗಾಳಿ ಬೀಸುತ್ತಿದೆ. ಇದರಿಂದಾಗಿ ಜನರು ಅನೇಕ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಬಿಸಿಲಿನ ತಾಪ, ಬಿಸಿಗಾಳಿ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: ಹೆಚ್ಚಾಯ್ತು H3N2 ವೈರಸ್ ಹಾವಳಿ – ಲಕ್ಷಣಗಳೇನು ಮತ್ತು ಮುನ್ನೆಚ್ಚರಿಕಾ ಕ್ರಮಗಳೇನು?

ಕಳೆದ ಕೆಲವು ದಿನಗಳಿಂದ ರಾಜ್ಯದ ವಾತಾವರಣದಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಈ ಬಾರಿ ವಾತಾವರಣದಲ್ಲಿ ಅಧಿಕ ಉಷ್ಣಾಂಶವಿದೆ. ಇದರಿಂದಾಗಿ ಜನರು ನಾನಾ ರೀತಿಯ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ. ಅಷ್ಟೇ ಅಲ್ಲದೇ ಬೇಸಿಗೆ ಗೈಡ್‌ಲೈನ್ಸ್ ಅನ್ನು ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದೆ.

ಆರೋಗ್ಯ ಇಲಾಖೆಯ ಗೈಡ್‌ಲೈನ್ಸ್‌ ಪ್ರಕಾರ, ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆ ಬಾಯಾರಿಕೆ ಇಲ್ಲದಿದ್ದರೂ ಪದೇ ಪದೇ ನೀರು ಕುಡಿಯಬೇಕು. ಪ್ರಯಾಣದ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು. ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಕಾಟನ್ ಬಟ್ಟೆ ಧರಿಸುವುದು ಉತ್ತಮವಾಗಿದೆ. ಮಧ್ಯಾಹ್ನ 12 ರಿಂದ 3ರ ವರೆಗಿನ ಬಿಸಿಲಿಗೆ ಹೊರಗಡೆ ಓಡಾಡಬಾರದು ಎಂದು ಹೇಳಿದೆ.

ಸಾಧ್ಯವಾದಷ್ಟು ಮನೆಯ ಕಿಟಕಿಗಳನ್ನು ತೆರೆದಿಡಬೇಕು. ಅಡುಗೆ ಕೋಣೆಯಲ್ಲಿ ವೆಂಟಿಲೇಷನ್ ಖಚಿತಪಡಿಸಿಕೊಳ್ಳಬೇಕು. ಹೊರಗಡೆ ಕೆಲಸ ಮಾಡುವವರು ಪ್ರತಿ 20 ನಿಮಿಷಕ್ಕೊಮ್ಮೆ ಬಾಯಾರಿಕೆ ಇಲ್ಲದಿದ್ದರೂ ನೀರು ಕುಡಿಯಬೇಕು. ಮಕ್ಕಳು, ವೃದ್ಧರು, ಸಾಕು ಪ್ರಾಣಿಗಳನ್ನು ಕಾರಿನ ಒಳಗೆ ಕೂರಿಸಿ ಹೊರಗಿಂದ ಲಾಕ್ ಮಾಡಬಾರದು. ಟೀ, ಕಾಫಿ, ಮದ್ಯ ಸೇವನೆ ಮಿತಿಯಲ್ಲಿರಲಿ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

suddiyaana