ಆಷಾಢ ಮಾಸದ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ಭಕ್ತಸಾಗರ – ಚಳಿ, ಮಳೆ ಲೆಕ್ಕಿಸದೆ ದೇವಿ ದರ್ಶನ

ಆಷಾಢ ಮಾಸದ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ಭಕ್ತಸಾಗರ – ಚಳಿ, ಮಳೆ ಲೆಕ್ಕಿಸದೆ ದೇವಿ ದರ್ಶನ

ಮೈಸೂರು: ಒಂದೆಡೆ ಮೈ ಕೊರೆಯುವ ಚಳಿ.. ಇನ್ನೊಂದೆಡೆ ತುಂತುರು ಮಳೆ. ಆದರೂ ಕೂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಆಷಾಢ ಮಾಸದ ಹಿನ್ನೆಲೆ ದೇವಿ ದೇವಾಲಯದಲ್ಲಿ ಜನಸಾಗರವೇ ಹರಿದು ಬರುತ್ತಿದೆ.

ಇದನ್ನೂ ಓದಿ: ಕ್ಷೇತ್ರದ ಜನರ ಸಮಸ್ಯೆ ಆಲಿಸಲು ವೆಬ್ ಸೈಟ್ ಆರಂಭಿಸಿದ ಪ್ರದೀಪ್ ಈಶ್ವರ್ – ದಿನದ 24 ಗಂಟೆಯೂ ಸ್ಪಂದಿಸಲು ಸಿಬ್ಬಂದಿ ನೇಮಕ

ಜನರು ಮೈ ಕೊರೆಯುವ ಚಳಿ, ತುಂತುರು ಮಳೆಯನ್ನು ಲೆಕ್ಕಿಸದೆ ದೇವಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲೆ, ರಾಜ್ಯ, ಹೊರರಾಜ್ಯದ ಭಕ್ತರು ಚಾಮುಂಡಿಬೆಟ್ಟಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸುವ ಶಕ್ತಿ ಯೋಜನೆ ಪರಿಣಾಮ ಕಣ್ಣಾಯಿಸಿದೆಲ್ಲೆಡೆ ಮಹಿಳೆಯರ ದಂಡೇ ಕಂಡು ಬಂತು. ಕೆಲವರು, ಮೆಟ್ಟಿಲುಗಳ ಮೂಲಕ ಬಂದರೆ ಇನ್ನು ಕೆಲವರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ದೇವಾಲಯಕ್ಕೆ ಆಗಮಿಸುತ್ತಿದ್ದಾರೆ.

ಆಷಾಢ ಮಾಸದ ಹಿನ್ನೆಲೆ ಚಾಮುಂಡೇಶ್ವರಿ ದೇವಸ್ಥಾನದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ತಾಯಿ ಚಾಮುಂಡೇಶ್ವರಿ ವಿಶೇಷ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ದೇವಾಲಯದ ಇಡೀ ಆವರಣ ವಿಶೇಷ ಹೂಗಳಿಂದ ಕಂಗೊಳಿಸುತ್ತಿದೆ. ಪ್ರವೇಶ ದ್ವಾರದಿಂದ ದೇವಸ್ಥಾನದ ಗರ್ಭಗುಡಿವರೆಗೆ ಹೂವುಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಆರ್ಕಿಡ್‌ ಹೂ, ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ನಾನಾ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಕಂಗೊಳಿಸುತ್ತಿದೆ. ಹೂವಿನಿಂದ ಚಾಮುಂಡೇಶ್ವರಿ ಅಮ್ಮ ಎಂದು ಅಲಂಕಾರ ಮಾಡಲಾಗಿದೆ.

suddiyaana