ರೈತರಿಗೆ ಮತ್ತೆ ಶಾಕ್ ಕೊಟ್ಟ ವರುಣ! – ಇನ್ನೆರಡು ದಿನ ಭಾರಿ ಮಳೆ.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ದೇಶದ ಹಲವು ಭಾಗಗಳಲ್ಲಿ ಕಳೆದ ಎರಡು ವಾರಗಳಿಂದ ಭಾರಿ ಮಳೆಯಾಗುತ್ತಿದೆ. ಅಕಾಲಿಕ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಭಾರಿ ಪ್ರಮಾಣದ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೆರಡು ದಿನ ಕೂಡ ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ದೇಗುಲದಲ್ಲಿ ಭೀಕರ ಕಾಲ್ತುಳಿತ! – 8 ಮಹಿಳೆಯರು ಸಾವು.. ಹಲವರ ಸ್ಥಿತಿ ಗಂಭೀರ
ರಾಜಧಾನಿ ಹಾಗೂ ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಐಎಂಡಿ ಪ್ರಕಾರ, ಧೂಳು, ಬಿರುಗಾಳಿ ಸೇರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದೆಹಲಿಯ ಉತ್ತರ, ವಾಯುವ್ಯ, ಮಧ್ಯ ಹಾಗೂ ದಕ್ಷಿಣ, ಗುರುಗ್ರಾಮ್ ಮತ್ತು ಫರಿದಾಬಾದ್‌ನಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ,ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ರಾಜಧಾನಿ ಹಾಗೂ ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಐಎಂಡಿ ಪ್ರಕಾರ, ಧೂಳು, ಬಿರುಗಾಳಿ ಸೇರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದೆಹಲಿಯ ಉತ್ತರ, ವಾಯುವ್ಯ, ಮಧ್ಯ ಹಾಗೂ ದಕ್ಷಿಣ, ಗುರುಗ್ರಾಮ್ ಮತ್ತು ಫರಿದಾಬಾದ್‌ನಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರ್ಗಿ, ಬೀದರ್, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರದಲ್ಲೂ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

ನೋಡಿರಿ

