ಮುಂಬೈ , ದೆಹಲಿ, ಗುಜರಾತ್‌ನಲ್ಲಿ ಮಳೆಯ ರುದ್ರ ನರ್ತನ – ಅರುಣಾಚಲ ಪ್ರದೇಶದಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ

ಮುಂಬೈ , ದೆಹಲಿ, ಗುಜರಾತ್‌ನಲ್ಲಿ ಮಳೆಯ ರುದ್ರ ನರ್ತನ – ಅರುಣಾಚಲ ಪ್ರದೇಶದಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ

ಮುಂಬೈ,  ದೆಹಲಿ, ಗುಜರಾತ್,  ಅರುಣಾಚಲ ಪ್ರದೇಶ  ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ದೆಹಲಿಯಲ್ಲಿ ರಾತ್ರಿ ಪೂರ್ತಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಇದೇ ವೇಳೆ ಗುಜರಾತ್‌ನ ಸುರತ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.  ಭಾರತೀಯ ಹವಾಮಾನ ಇಲಾಖೆ  ದೆಹಲಿಯಲ್ಲಿ ‘ರೆಡ್ ಅಲರ್ಟ್’ ಘೋಷಿಸಿದೆ. ಗುಡುಗು ಮತ್ತು ಮಿಂಚಿನೊಂದಿಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ನಾಳೆಯಿಂದ ಆಪರೇಷನ್ ಅನಾಥ ವೆಹಿಕಲ್ಸ್ – ನಿಮ್ಮ ವಾಹನ ಫುಟ್‌ಪಾತ್ ಮೇಲಿದ್ರೆ ಹುಷಾರ್

ಮಹಾರಾಷ್ಟ್ರದಾದ್ಯಂತ ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ವಾಣಿಜ್ಯ ನಗರಿ ಮುಂಬೈ ಮತ್ತು ಉಪನಗರಗಳು ಸಂಪೂರ್ಣ ತತ್ತರಿಸಿವೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮುಂಗಾರು ಮಳೆಯಿಂದಾಗಿ ನಗರದಾದ್ಯಂತ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ರೈಲು ಹಾಗೂ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಅರುಣಾಚಲ ಪ್ರದೇಶದ ಲೋಹಿತ್ ಜಿಲ್ಲೆಯ ಶಿವಾಜಿ ನಗರದಲ್ಲಿ ನಿರಂತರ ಮಳೆಯಿಂದ ಭಾರೀ ಭೂಕುಸಿತ ಸಂಭವಿಸಿದೆ. ಬೆಟ್ಟದ ಇಳಿಜಾರು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಐವರು ಸಿಲುಕಿಕೊಂಡಿದ್ದು, ಒಬ್ಬರು ಹೊರಬಂದಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಸಿಬ್ಬಂದಿ ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆದಿದ್ದಾರೆ. ಅವಶೇಷಗಳ ಅಡಿ ನಾಲ್ವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Kishor KV