ಮುಂದಿನ 4 ದಿನ ರಾಜ್ಯದಲ್ಲಿ ಮಳೆ ಆರ್ಭಟ – ಕರಾವಳಿ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಿದ IMD!

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಮುಂದಾಗಿದ್ದಾನೆ. ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಸಾರಿಗೆ ನೌಕರರು ಸಹಕರಿಸಿ ಮುಷ್ಕರ ಕೈ ಬಿಡಿ – ಡಿಕೆ ಶಿವಕುಮಾರ್
ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿತ್ತು. ಇನ್ನು ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಆಗಸ್ಟ್ 5 ಮತ್ತು 6 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. ಆಗಸ್ಟ್ 7 ಮತ್ತು 8 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದ್ದು, 24 ಗಂಟೆ ಅವಧಿಯಲ್ಲಿ 115 ಮಿಲಿಮೀಟರ್ ನಿಂದ 204 ಮಿಲಿಮೀಟರ್ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 5 ರಿಂದ ಆಗಸ್ಟ್ 8ರವರೆಗೆ ನಾಲ್ಕು ದಿನವೂ ಯೆಲ್ಲೋ ಆಲರ್ಟ್ ನೀಡಲಾಗಿದೆ. ಆಗಸ್ಟ್ 5 ರಂದು ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ರಾಮನಗರ, ಮಂಡ್ಯ, ಹಾಸನ, ಬೆಂಗಳೂರು ನಗರ, ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.
ಆಗಸ್ಟ್ 6 ರಂದು ಹಾಸನ, ಮಂಡ್ಯ, ಮೈಸೂರು ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ತುಮಕೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಗುಡುಗು ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಿಗೂ ಆಗಸ್ಟ್ 5 ರಿಂದ ಆಗಸ್ಟ್ 8ರವರೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. ಇನ್ನೂ ಕಳೆದ 24 ಗಂಟೆ ಅವಧಿಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಅತ್ಯಧಿಕ ಮಳೆಯಾಗಿದೆ. ಶಿವಪುರ ಗ್ರಾಮದಲ್ಲಿ 158 ಮಿ.ಮೀಟರ್ ನಷ್ಟು ಭಾರಿ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.

ನೋಡಿರಿ

