ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ಮಲೆನಾಡು ಕರಾವಳಿಯ ಸುಮಾರು 20 ಜಿಲ್ಲೆಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:ಗ್ರಾಮದ ಮೇಲೆ ಹಾರಿದ ಹೆಲಿಕಾಪ್ಟರ್ ಶಬ್ದದಿಂದ ನನ್ನ ಎಮ್ಮೆ ಸತ್ತಿದೆ- ರೈತ ಬರೆದ ದೂರಿನ ಪತ್ರ ವೈರಲ್
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು ಪ್ರದೇಶಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರು ಭಾಗದಲ್ಲಿ ನಿರಂತರ ಮಳೆಯಾಗಲಿದೆ. ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿರುತ್ತದೆ. ನಿರೀಕ್ಷಿತ ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.