ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆ!
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಗುಡುಗು, ಮಿಂಚು,ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಧಾರಾಕಾರ ಮಳೆಗೆ ಬೆಂಗಳೂರಿನ ಹಲವೆಡೆ ಪ್ರವಾಹದಂತೆ ಹರಿದ ನೀರು – ಇನ್ನೂ ಎಷ್ಟು ದಿನ ವರುಣಾರ್ಭಟ?
ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನಲ್ಲಿ 2 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಕನಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಏಪ್ರಿಲ್ 4 ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.