ರಾಜ್ಯದಲ್ಲಿ 4 ದಿನ ಭಾರಿ ಮಳೆ ಆರ್ಭಟ – ಎಲ್ಲೆಲ್ಲಿ ರೆಡ್‌ ಅಲರ್ಟ್‌ ಘೋಷಣೆ?

ರಾಜ್ಯದಲ್ಲಿ 4 ದಿನ ಭಾರಿ ಮಳೆ ಆರ್ಭಟ – ಎಲ್ಲೆಲ್ಲಿ ರೆಡ್‌ ಅಲರ್ಟ್‌ ಘೋಷಣೆ?

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದಿದೆ. ಮಲೆನಾಡು ಭಾಗ, ಕರಾವಳಿಯಲ್ಲಿ ನಿನ್ನೆ ಭಾರಿ ಮಳೆಯಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲ್ಲುತ್ತಾ ಸೌತ್ ಆಫ್ರಿಕಾ – ಚೋಕರ್ಸ್ ಹಣೆಪಟ್ಟಿ ಕಳಚುತ್ತಾ?

ಜೂನ್ 15ರವರೆಗೆ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?

ಜೂ.12: ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂ.13: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂ.14: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Shwetha M