ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಎಲ್ಲೆಲ್ಲಿ ರೆಡ್ ಅಲರ್ಟ್ ಘೊಷಣೆ?

ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 5 ದಿನ ರಾಜ್ಯದಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಥೈಲಾಂಡ್ನಲ್ಲಿ ದಾಸ ಫುಲ್ ಜಾಲಿ – ಇತ್ತ ಡೆವಿಲ್ ಸಂಭ್ರಮಕ್ಕೆ ಸಜ್ಜಾದ ಡಿಬಾಸ್ ಫ್ಯಾನ್ಸ್!
ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತ ಮಳೆ ಸುರಿಯುತ್ತಿದೆ. , ಈಗಾಗಲೇ ಸಾಕಷ್ಟು ಅವಾಂತರ ಸೃಷ್ಠಿಯಾಗಿದೆ. ಇಂದು ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಿದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನಲೆ ಭಾರತೀಯ ಹವಾಮಾನ ಇಲಾಖೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ದಟ್ಟ ಮಂಜು, ವಾಹನ ಸವಾರರು ಪರದಾಡುವಂತಾಗಿದೆ. ಜಲಪಾತ ಬಳಿ ತೆರಳದಂತೆ ಪ್ರವಾಸಿಗರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

ನೋಡಿರಿ

