ನಾಗ್ಪುರದಲ್ಲಿ ವರುಣನ ರುದ್ರನರ್ತನ – ಹಲವು ಪ್ರದೇಶಗಳು ಜಲಾವೃತ, 180ಕ್ಕೂ ಹೆಚ್ಚು ಮಂದಿಯ ರಕ್ಷಣೆ

ನಾಗ್ಪುರ: ನಾಗ್ಪುರದಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದೆ. ನಿರಂತವಾಗಿ ಮಳೆ ಸುರಿಯುತ್ತಿರುವ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
ನಗರದಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೂಡಲೇ ಎಚ್ಚೆತ್ತ ಆಡಳಿತ ರಕ್ಷಣಾ ಕಾರ್ಯಾಚರಣೆ ನಡೆಸಿ 180ಕ್ಕೂ ಅಧಿಕ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.
ಇದನ್ನೂ ಓದಿ: ಕಾವೇರಿ ನೀರಿಗಾಗಿ ತೀವ್ರಗೊಂಡ ಹೋರಾಟ – ಬೆಂಗಳೂರಿನಲ್ಲಿ ಹೈಅಲರ್ಟ್ ಘೋಷಣೆ!
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 5.30 ರ ವರೆಗೆ ಸುಮಾರು 106 ಮಿಮೀ ಮಳೆಯಾಗಿದೆ. ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ನಗರದ ಹಲವಾರು ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಶಾಲೆಗಳಿಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಂಬಾಝರಿ ಕೆರೆ ತುಂಬಿ ಹರಿಯುತ್ತಿದ್ದು ಪರಿಣಾಮ ಸುತ್ತ ಮುತ್ತಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ತಗ್ಗು ಪ್ರದೇಶದಲ್ಲಿರುವವರನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಟ್ವಿಟರ್ x ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನೋಡಿರಿ

