ಉತ್ತರ ಭಾರತದಲ್ಲಿ ಮಳೆಯ ಆರ್ಭಟ! –  ಪಂಜಾಬ್‌ನಲ್ಲಿ ಭೀಕರ ಪ್ರವಾಹಕ್ಕೆ 45ಕ್ಕೂ ಹೆಚ್ಚು ಮಂದಿ ಸಾವು!

ಉತ್ತರ ಭಾರತದಲ್ಲಿ ಮಳೆಯ ಆರ್ಭಟ! –  ಪಂಜಾಬ್‌ನಲ್ಲಿ ಭೀಕರ ಪ್ರವಾಹಕ್ಕೆ 45ಕ್ಕೂ ಹೆಚ್ಚು ಮಂದಿ ಸಾವು!

ದೇಶದ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಉತ್ತರ ಭಾರತದಲ್ಲೂ ಭಾರಿ ಮಳೆಯಾಗುತ್ತಿದೆ. ಹಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಸಾಕಷ್ಟು ಪ್ರಮಾಣದ ಹಾನಿಯಾಗಿದೆ. ಪಂಜಾಬ್‌ನಲ್ಲಿ ಭೀಕರ ಪ್ರವಾಹ  ಉಂಟಾಗಿದ್ದು, ಇದುವರೆಗೂ 45ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಏಷ್ಯಾಕಪ್ ನಲ್ಲಿ ಭಾರತ Vs ಪಾಕ್ ಫೈಟ್ ನಡೆದಿಲ್ಲ – ಈ 5 ಪಂದ್ಯಗಳ ಕ್ಲೈಮ್ಯಾಕ್ಸ್ ಸೂಪರ್

ಪಂಜಾಬ್‌ನಲ್ಲಿ ಭಾರಿ ಮಳೆಯಾಗುತ್ತಿದೆ. ಭೀಕರ ಪ್ರವಾಹ ಉಂಟಾಗಿದ್ದು, 45 ಜನರು ಸಾವನ್ನಪ್ಪಿದ್ದು, ರಾಜ್ಯದ 23 ಜಿಲ್ಲೆಗಳ 1,655 ಹಳ್ಳಿಗಳಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. 20,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಇನ್ನು ಭಾರಿ ಮಳೆಯಿಂದಾಗಿ ಬರೋಬ್ಬರಿ 1.71 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದ ಬೆಳೆಗಳು ನಾಶವಾಗಿವೆ. ಇನ್ನು ಜಮ್ಮು-ಶ್ರೀನಗರ ಹೆದ್ದಾರಿ ಮತ್ತು ಸಿಂಥಾನ್ ರಸ್ತೆಯ ಹಲವಾರು ಸ್ಥಳಗಳಲ್ಲಿ ಭೂಕುಸಿತ, ಮಣ್ಣು ಕುಸಿತ ಮತ್ತು ಕಲ್ಲುಗಳು ಬೀಳುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಜಮ್ಮು-ಶ್ರೀನಗರ ಹೆದ್ದಾರಿಯನ್ನು ಮುಚ್ಚಲಾಗಿದೆ. ಮೊಘಲ್ ರಸ್ತೆಯಲ್ಲಿ ಸಂಚಾರವನ್ನು ಪುನಃಸ್ಥಾಪಿಸಲಾಗಿದೆ.

ಭದ್ರತಾ ಕಾರಣಗಳಿಂದಾಗಿ ಮಾತಾ ವೈಷ್ಣೋ ದೇವಿಯ ಯಾತ್ರೆಯನ್ನು 11ನೇ ದಿನವೂ ಸ್ಥಗಿತಗೊಳಿಸಲಾಗಿದೆ. ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಭೂಕುಸಿತದ ಸಂಭವಿಸಿದ್ದು, ಕನಿಷ್ಠ ನಾಲ್ಕು ಜನರನ್ನು ಹೊತ್ತ ವ್ಯಾನ್ ತೆರೆದ ಗುಂಡಿಯ ಕೆಳಭಾಗದಲ್ಲಿ ಸಂಗ್ರಹವಾದ ನೀರಿನಲ್ಲಿ 150 ಅಡಿ ಆಳಕ್ಕೆ ಬಿದ್ದಿದೆ. ರಾಜಸ್ಥಾನ, ಗುಜರಾತ್‌ನ ಕೆಲ ಭಾಗಗಳಲ್ಲಿ ಇಂದು ಮಳೆ ಮುಂದುವರಿಯಲಿದೆ. ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಸ್ಥಿತಿ ಇನ್ನಷ್ಟು ಹೆಚ್ಚಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M