ಬಿಸಿಲ ನಾಡಿನಲ್ಲಿ ಮುಂದುವರಿದ ಮಳೆಯ ಅಬ್ಬರ – ಶಾಲೆಗಳಿಗೆ ರಜೆ ಘೋಷಣೆ

ಬಿಸಿಲ ನಾಡಿನಲ್ಲಿ ಮುಂದುವರಿದ ಮಳೆಯ ಅಬ್ಬರ – ಶಾಲೆಗಳಿಗೆ ರಜೆ ಘೋಷಣೆ

ಕಳೆದ ಮೂರು ದಿನಗಳಿಂದ ಬಿಸಿಲನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಕಲಬುರಗಿ, ಬೀದರ್‌, ಯಾದಗಿರಿಯಲ್ಲಿ ನಿರಂತವಾಗಿ ಮಳೆ ಸುರಿಯುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ – ರೈಲಿನಲ್ಲಿ ಸಿಗಲಿದೆ 20 ರೂ.ಗೆ ತಿಂಡಿ, 3 ರೂ.ಗೆ ನೀರು!

ಜಿಲ್ಲೆಯಲ್ಲಿ ನಿರಂತವಾಗಿ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿವೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಯಾ ತಹಶೀಲ್ದಾರ್ ಮೂಲಕ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರಮಠಕಲ್ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜಾ ದಿನ ಅವಧಿ ಸರಿದೂಗಿಸಲು ಭಾನುವಾರ ಶಾಲೆಗಳನ್ನು ಯಥಾ ಪ್ರಕಾರ ನಡೆಸಲು ಸೂಚನೆ ನೀಡಲಾಗಿದೆ.

ಗುರುವಾರ ತಡರಾತ್ರಿ ಜಿಲ್ಲೆಯಾದ್ಯಂತ ಸುರಿದ ಬಾರಿ ಮಳೆ ಹೊಡೆತಕ್ಕೆ ಯಾದಗಿರಿ ನಗರದ ರಸ್ತೆಗಳು ಜಲಾವೃತವಾಗಿವೆ. ಯಾದಗಿರಿ ನಗರದ ರೈಲ್ವೆ ಸ್ಟೇಷನ್ ರಸ್ತೆ ಸಂಪೂರ್ಣ ಜಲಾವೃತಗೊಂಡಿರುವುದರಿಂದ ವಾಹನ ಸವಾರರು ಪರದಾಡಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗಲೂ ರೈಲ್ವೆ ಸ್ಟೇಷನ್ ರಸ್ತೆ ಜಲಾವೃತಗೊಳ್ಳುತ್ತಿದ್ದು, ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಇನ್ನು ಕಲಬುರಗಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದ ಕಾಗಿನಾ ನದಿ ಉಕ್ಕಿ ಹರಿಯುತ್ತಿದ್ದು, ಮಳಖೇಡ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಈ ಸಂಬಂಧ ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಸೇಡಂ ತಾಲೂಕಿನ ಕಾಗಿನಾ ನದಿಗೆ ಅಡ್ಡಲಾಗಿ ಮಳಖೇಡ ಸೇತುವೆಯನ್ನ ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆ ನೀರಿನಿಂದ ತುಂಬಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬೆಳಗ್ಗೆ ನಾಲ್ಕು ಗಂಟೆಯಿಂದ ಸಂಚಾರ ಸ್ಥಗಿತಗೊಳಿಸಿದ್ದಾರೆ.

suddiyaana