ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯಾವ ಜಿಲ್ಲೆಗಳಲ್ಲಿ ವರುಣನ ಅಬ್ಬರ?

ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯಾವ ಜಿಲ್ಲೆಗಳಲ್ಲಿ ವರುಣನ ಅಬ್ಬರ?

ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 4 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಸಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆಯ ಅವಘಡ ತಪ್ಪಿಸಲು ಬೇಕಿದೆ 658 ಕಿ.ಮೀ ಒಳಚರಂಡಿ ವಿಸ್ತರಣೆ! – ಅಧ್ಯಯನ ವರದಿಯಲ್ಲಿ ಏನಿದೆ?

ಇನ್ನು ಜೂನ್ 6ರ ನಡುವೆ ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗಲಿನ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಜೋರಾದ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6ರ ನಡುವೆ ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಈ ಬಾರಿಯ ನೈಋತ್ಯ ಮುಂಗಾರು ವಿಳಂಬವಾಗಲಿದ್ದು, ಜೂನ್ 4ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರದಲ್ಲೇ ನೈರುತ್ಯ ಮುಂಗಾರು ಕರ್ನಾಟಕಕ್ಕೆ ಅಪ್ಪಳಿಸಬೇಕು. ಆದರೆ, ಕೇರಳಕ್ಕೆ ತಡವಾಗಿ ಪ್ರವೇಶಿಸುವ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭ ಕೆಲವು ದಿನಗಳ ಮಟ್ಟಿಗೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

suddiyaana