ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್​ ಘೋಷಣೆ

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆರಾಯನ ಅಬ್ಬರ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಮುಂಗಾರು ಮಳೆ ಮತ್ತೆ ವಿಳಂಬ! – ಐಎಂಡಿ ಅಧಿಕಾರಿಗಳು ಹೇಳಿದ್ದೇನು?

ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ  ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇನ್ನು ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

suddiyaana